ಪ್ಲೇ ಸ್ಕೂಲ್ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: ತನಿಖೆ ನಡೆಸಲು ಪೊಲೀಸ್ ಆಯುಕ್ತರಿಗೆ ಸಿಎಂ ಸೂಚನೆ
ನಗರದ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಗುವಿನ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ತನಿಖೆ ನಡೆಸುವಂತೆ...

Published On :
ಬೆಂಗಳೂರು:ನಗರದ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಗುವಿನ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗುವಿನ ಮೇಲೆ ದೌರ್ಜನ್ಯ ನಡೆಸಿದವರನ್ನು ಶಿಕ್ಷಿಸದೆ ಬಿಡಬಾರದು. ಈ ಘಟನೆ ಹೇಗಾಯಿತು, ಯಾರು ಕಾರಣರು ಎಂಬ ಬಗ್ಗೆ ಗಂಭೀರ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದರು.
ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ನೀತಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕೆಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಅಲ್ಲದೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಹಿಂಸೆ, ಸುರಕ್ಷತೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಜಾಗೃತಿ ಮೂಡಿಸಲು ಇದು ಸೂಕ್ತ ಸಮಯ.
ಶಾಲೆಗಳಲ್ಲಿ ಮಕ್ಕಳ ರಕ್ಷಣೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಬೆಂಗಳೂರಿನ ಖಾಸಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕೆಲ ದಿನಗಳ ಹಿಂದೆ ಮೂರು ವರ್ಷದ ಮಗುವಿನ ಮೇಲೆ ಶಾಲೆಯ ಮೇಲ್ವಿಚಾರಕ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಪೊಲೀಸ್ ಆಯುಕ್ತPolice ComissionerChild abuseಪ್ಲೇ ಸ್ಕೂಲ್Play schoolಮಗುವಿನ ಮೇಲೆ ದೌರ್ಜನ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


