ಮಂಗಳೂರಿಗೆ ಕೇರಳ ಸಿಎಂ: ಸಂಘಪರಿವಾರದಿಂದ ವ್ಯಾಪಕ ಪ್ರತಿಭಟನೆ, ದ.ಕನ್ನಡ ಬಂದ್!
ಕೇರಳದಲ್ಲಿ ಇತ್ತೀಚೆಗೆ ನಡೆದ ಆರ್ ಎಸ್ ಎಸ್ ಮುಖಂಡ ರವೀಂದ್ರನಾಥ್ ಹತ್ಯೆಯಲ್ಲಿ ಸಿಪಿಎಂ ಕೈವಾಡವಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ವ್ಯಾಪರ ಪ್ರತಿಭಟನೆ ನಡೆಸುತ್ತಿದ್ದು. ದ.ಕನ್ನಡ ಬಂದ್ ಘೋಷಣೆ ಮಾಡಿದ್ದಾರೆ.

ಮಂಗಳೂರು: ಕೇರಳದಲ್ಲಿ ಇತ್ತೀಚೆಗೆ ನಡೆದ ಆರ್ ಎಸ್ ಎಸ್ ಮುಖಂಡ ರವೀಂದ್ರನಾಥ್ ಹತ್ಯೆಯಲ್ಲಿ ಸಿಪಿಎಂ ಕೈವಾಡವಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ವ್ಯಾಪರ ಪ್ರತಿಭಟನೆ ನಡೆಸುತ್ತಿದ್ದು. ದ.ಕನ್ನಡ ಬಂದ್ ಘೋಷಣೆ ಮಾಡಿದ್ದಾರೆ.
ಅಲ್ಲದೆ ಇಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಮಂಗಳೂರಿನ ನೆಹರೂ ಮೈದಾನದಲ್ಲಿ ಸಿಪಿಎಂ ಸಮಾವೇಶ "ಕರಾವಳಿ ಸೌಹಾರ್ಧ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಪಿಣರಾಯಿ ವಿಜಯನ್ ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಕಾಲಿಡಬಾರುದ ಎಂದು ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ ಸಂಘಪರಿವಾರ ಕರೆ ನೀಡಿರುವ ಬಂದ್ ಅನ್ನು ಜಿಲ್ಲಾಡಳಿತ ವಿಫಲಗೊಳಿಸಲು ಯತ್ನಿಸುತ್ತಿದೆ ಎಂಬ ಆರೋಪ ಕೂಡ ಕೇಳಿಬರುತ್ತಿದ್ದು, ಇದೇ ಕಾರಣಕ್ಕೆ ಸುಮಾರು 10ಕ್ಕೂ ಹೆಚ್ಚು ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಾರ್ಯಕರ್ತರು ಕಲ್ಲು ತೂರಿದ್ದಾರೆ. ಪರಿಣಾಮ ಹಲವು ಬಸ್ ಗಳ ಗಾಜುಗಳ ಪುಡಿ ಪುಡಿಯಾಗಿದ್ದು, ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ವಿರಳವಾಗಿದೆ.
ಇತ್ತ ಕೇರಳದಿಂದ ಕರ್ನಾಟಕಕ್ಕೆ ಆಗಮಿಸುತ್ತಿದ್ದ ಖಾಸಗಿ ವಾಹನಗಳೂ ಕೂಡ ಸ್ಥಗಿತಗೊಂಡಿದ್ದು, ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗುವ ಸಾಧ್ಯತೆ ಇದ್ದರಿಂದ ವಾಹನಗಳ ಮಾಲೀಕರು ವಾಹನಗಳನ್ನು ರಸ್ತೆಗಿಳಿಸಿಲ್ಲ ಎಂದು ಹೇಳಲಾಗುತ್ತಿದೆ.
ವ್ಯಾಪಕ ಬಂದೋಬಸ್ತ್
ಇಂದು ಮಧ್ಯಾಹ್ನ ಸುಮಾರು 3.30 ರ ಸುಮಾರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದ್ದು, ಮಂಗಳೂರಿನ ನೆಹರೂ ಮೈದಾನದಲ್ಲಿ ಸಿಪಿಎಂ ಸಮಾವೇಶ "ಕರಾವಳಿ ಸೌಹಾರ್ಧ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕೆ ಸಂಘಪರಿವಾರದ ವಿರೋಧ ಇರುವುದರಿಂದ ಮಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ವ್ಯಾಪಕ ಕಚ್ಚೆತ್ತರ ವಹಿಸಲಾಗಿದೆ. ಪ್ರಮುಖವಾಗಿ ಮಂಗಳೂರಿನ ನೆಹೂರು ಮೈದಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲಿಸ್ ಸರ್ಪಗಾವಲು ಹಾಕಲಾಗಿದ್ದು, ಸುಮಾರು 300 ಅಧಿಕ ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಈ ವರೆಗೂ ಸುಮಾರು 25ಕ್ಕೂ ಅಧಿಕ ಸಂಘುಪರಿವಾರದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸ್ ಮೇಲೆ ಕಲ್ಲು ತೂರಾಟ, ಪರೀಕ್ಷೆ ಬರೆಯಲಾಗದೇ ಕಂಗಾಲಾದ ವಿದ್ಯಾರ್ಥಿಗಳು
ಇನ್ನು ಪಿಯು ಪರೀಕ್ಷೆಗಳು ನಡೆಯುತ್ತಿದ್ದು, ಇಂದು ಸಂಘಪರಿವಾರದ ಕಾರ್ಯಕರ್ತರು ಸರ್ಕಾರಿ ಬಸ್ ಗಳಿಗೆ ಕಲ್ಲು ತೂರಾಟ ನಡೆಸಿದ್ದರಿಂದ ಬಹುತೇಕ ಸರ್ಕಾರಿ ಬಸ್ ಸೇವೆ ಸ್ಥಗಿತಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು ಕಾಲೇಜಿಗೆ ತೆರಳಿ ಪರೀಕ್ಷೆ ಬರೆಯಲಾಗದೆ ಕಂಗಾಲಾಗಿದ್ದಾರೆ. ಇತ್ತ ಶಿಕ್ಷಣ ಇಲಾಖೆ ಪರೀಕ್ಷೆ ಮುಂದೂಡಬೇಕು ಎನ್ನುವ ಒತ್ತಡ ಕೂಡ ಕೇಳಿಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


