ರಾಜ್ಯ

ಸಂಪುಟದಿಂದ ಯಾವ ಸಚಿವರನ್ನು ಕೈ ಬಿಡುವುದಿಲ್ಲ: ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಿರಿಯ ಸಚಿವರು ಸದ್ಯ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಯಾವುದೇ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡದೇ ಇರಲು...

ಸಂಪುಟದಿಂದ ಯಾವ ಸಚಿವರನ್ನು ಕೈ ಬಿಡುವುದಿಲ್ಲ: ಸಿಎಂ ಸ್ಪಷ್ಟನೆ
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮನ್ವಯ ಸಮಿತಿ ಸಭೆ
Published On :

ಬೆಂಗಳೂರು: ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಿರಿಯ ಸಚಿವರು ಸದ್ಯ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.  ಯಾವುದೇ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವುದಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಮನ್ವಯ ಸಮಿತಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಸಂಪುಟ ಪುನರ್ ರಚನೆ ಪ್ರಸ್ತಾವ ಇಲ್ಲ ಎಂದರು. ಅಂತಹ ಯಾವುದೇ ಪ್ರಸ್ತಾವ ಇಲ್ಲ. ಅಂತಹ ಪ್ರಸ್ತಾವ ಇದೆ ಎಂದು ಯಾರು ಹೇಳಿದರು? ಅವೆಲ್ಲವೂ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದರು.

ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟು ನಾಲ್ಕು ವರ್ಷ ಪೂರೈಸಿದ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷ ಸಂಘಟನೆಗೆ ಬಳಸಿಕೊಳ್ಳುವ ಪ್ರಸ್ತಾವ ಸಮನ್ವಯ ಸಮಿತಿ ಸಭೆಯ ಕರಡು ಕಾರ್ಯಸೂಚಿಯಲ್ಲಿ ಇದೆ ಎಂಬ ಸುದ್ದಿ ಪಕ್ಷದ ವಲಯದಲ್ಲಿ ಗೊಂದಲ ಸೃಷ್ಟಿಸಿತ್ತು. ಈ ಸುದ್ದಿಯ ಬಗ್ಗೆ ಉತ್ತರಿಸಿದ ಸಿಎಂ ಅಂಥಹ ಯಾವುದೇ ಯೋಚನೆ ಸದ್ಯ ನಮ್ಮ ಮುಂದಿಲ್ಲ ಎಂದು ಸ್ಪಷ್ಟ ಪಡಿಸಿದರು.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ ಸಿಂಗ್‌ ನೇತೃತ್ವದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್‌, ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರು, ಸಚಿವರು ಭಾಗವಹಿಸಿದ್ದರು.

ಚುನಾವಳಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಆಶ್ವಾಸನೆಗಳಲ್ಲಿ ಸಿದ್ದರಾಮಯ್ಯ ಸರ್ಕಾರ 136 ಭರವಸೆಗಳನ್ನು ಈಡೇರಿಸಿದೆ. ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ನಾವು ಜನಾದೇಶ ಕೇಳುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಕರಡು ಕಾರ್ಯಸೂಚಿ ಬಗ್ಗೆ ಯಾರೂ ಮಾತನಾಡಬಾರದು. ಈ ಕುರಿತು ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಎಲ್ಲ ಸದಸ್ಯರಿಗೆ ಸೂಚನೆ ನೀಡಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.