ಹುನಗುಂದದಲ್ಲಿ ಪ್ರತಿಭಟನೆ ವೇಳೆ ಸಚಿವೆ ಉಮಾಶ್ರೀ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಗರಿಷ್ಠ ಮೌಲ್ಯದ ನೋಟು ನಿಷೇಧ ಖಂಡಿಸಿ ಬಾಗಲಕೋಟೆ ಜಿಲ್ಲೆ ಹುನಗುಂದದಲ್ಲಿ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಮಹಿಳಾ...

Published On :
ಬಾಗಲಕೋಟೆ: ಗರಿಷ್ಠ ಮೌಲ್ಯದ ನೋಟು ನಿಷೇಧ ಖಂಡಿಸಿ ಬಾಗಲಕೋಟೆ ಜಿಲ್ಲೆ ಹುನಗುಂದದಲ್ಲಿ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಅಸ್ವಸ್ಥಗೊಂಡಿದ್ದು, ಅವರನ್ನು ಕೂಡಲೇ ತಾಲೂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮೆರವಣಿಗೆ ಮೂಲಕ ಪ್ರತಿಭಟನಾ ವೇದಿಕೆಗೆ ಬರುತ್ತಿದ್ದ ಸಚಿವೆ ಉಮಾಶ್ರೀ ಅವರು ಅಸ್ವಸ್ಥಗೊಂಡಿದ್ದರು, ಕೂಡಲೇ ಅವರನ್ನು ಹುನಗುಂದದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಹುನಗುಂದ ತಾಲೂಕು ವೈದ್ಯಾಧಿಕಾರಿ ಡಾ.ಕುಸುಮಾ ಅವರು, ಸಚಿವೆ ಉಮಾಶ್ರೀ ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


