ರಾಜ್ಯ

ಜೆಡಿಎಸ್ ಕಾರ್ಯಕರ್ತರ ಕೊಲೆ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್

ಮಂಡ್ಯ ಜಿಲ್ಲೆಯಲ್ಲಿ ಕಳೆದ ವಾರ ನಡೆದ ಇಬ್ಬರು ಜೆಡಿಎಸ್ ಕಾರ್ಯಕರ್ತರ ಕೊಲೆ ಪ್ರಕರಣವನ್ನು ಗೃಹ ಸಚಿವ ಜಿ. ಪರಮೇಶ್ವರ್ ಸಿಐಡಿ ತನಿಖೆಗೆ...

ಜೆಡಿಎಸ್ ಕಾರ್ಯಕರ್ತರ ಕೊಲೆ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್
ಜಿ.ಪರಮೇಶ್ವರ್
Published On :

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಕಳೆದ ವಾರ ನಡೆದ ಇಬ್ಬರು  ಜೆಡಿಎಸ್ ಕಾರ್ಯಕರ್ತರ ಕೊಲೆ ಪ್ರಕರಣವನ್ನು ಗೃಹ ಸಚಿವ ಜಿ. ಪರಮೇಶ್ವರ್ ಸಿಐಡಿ ತನಿಖೆಗೆ ವಹಿಸಿದ್ದಾರೆ.

ಡಿಸೆಂಬರ್ 25 ರಂದು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ನಂದೀಶ್ ಮತ್ತು ಮುತ್ತರಾಜ್ ಎಂಬುವರನ್ನ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ತೊಪ್ಪನಹಳ್ಳಿ ಗ್ರಾಮದಲ್ಲಿ ಇರಿದು ಕೊಲ್ಲಲಾಗಿತ್ತು. ಗ್ರಾಮದಲ್ಲಿ ಕುಡಿಯುವ ನೀರಿನ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದರು.

ಭಾನುವಾರ ಕೆಆರ್ ಪೇಟೆ ತಾಲೂಕಿನ ಮುರುಕನಹಳ್ಳಿಯ ಹರೀಶ್ ಎಂಬಾತನ ಕೊಲೆಯಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಹರೀಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.  ಹೀಗಾಗಿ ಸಚಿವ ಪರಮೇಶ್ವರ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.