ರಾಜ್ಯ

ಆಕ್ಷೇಪಾರ್ಹ ಹೇಳಿಕೆ: ಗೃಹ ಸಚಿವ ಪರಮೇಶ್ವರ್, ಎಸ್ ಪಿ ಮುಖಂಡನಿಗೆ ಸಮನ್ಸ್

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಘಟನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ...

ಆಕ್ಷೇಪಾರ್ಹ ಹೇಳಿಕೆ: ಗೃಹ ಸಚಿವ ಪರಮೇಶ್ವರ್, ಎಸ್ ಪಿ ಮುಖಂಡನಿಗೆ ಸಮನ್ಸ್
ಜಿ. ಪರಮೇಶ್ವರ್
Published On :

ನವದೆಹಲಿ/ ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಘಟನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮತ್ತು ಸಮಾಜವಾದಿ ಪಕ್ಷದ ಮುಖಂಡ ಅಬು ಅಜ್ಮಿ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸಮನ್ಸ್‌ ಜಾರಿಗೊಳಿಸಿದೆ.
 
ಪರಮೇಶ್ವರ್ ಮತ್ತು ಅಜ್ಮಿ ನೀಡಿದ ಹೇಳಿಕೆ ಆಧರಿಸಿ ಅವರಿಗೆ ಸಮನ್ಸ್ ಜಾರಿಗೊಳಿಸಿ, ಉತ್ತರ ನೀಡುವಂತೆ ಸೂಚಿಸಲಾಗಿದೆ ಎಂದು ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಲಂ ತಿಳಿಸಿದರು. ದೇಶದಲ್ಲಿರುವ ಎಲ್ಲಾ ಪುರುಷರು ಇದೇ ರೀತಿಯಿಲ್ಲ, ಶೇ, 25 ರಷ್ಟು ಪುರುಷರು ದೇಶದ ಮಹಿಳೆಯರಿಗೆ ಗೌರವ ನೀಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಪಾಶ್ಚಿಮಾತ್ಯ ಸಂಸ್ಕೃತಿ ಅನುಸರಿಸುವುದರಿಂದ ಇಂಥ ಘಟನೆಗಳು ನಡೆಯುತ್ತವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ಖಂಡಿಸಿರುವ ಕುಮಾರ ಮಂಗಲಂ , ಕೂಡಲೇ ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಹಿಳೆಯರ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.

ಘಟನೆಯಲ್ಲಿ ಪಾಲ್ಗೋಂಡ ಆರೋಪಿಗಳ ವಿರುದ್ಧ ಯಾವ ರೀತಿಯ ಶಿಸ್ತು ಕ್ರಮ ಜರುಗಿಸಿದ್ದೀರಾ ಎಂಬುದರ ಬಗ್ಗೆ ಲಿಖಿತ ಮಾಹಿತಿ ನೀಡುವಂತೆ ಐಜಿ, ಡಿಜಿ, ನಗರ ಪೊಲೀಸ್ ಆಯುಕ್ತ ಮತ್ತು ಗೃಹ ಸಚಿವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.