ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ಲಿನೋ, ಅಯ್ಯಪ್ಪ ಸೇರಿ ನಾಲ್ವರ ಬಂಧನ
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಲಿನೋ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಲಿನೋ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯದ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಇಂದು ಪ್ರಮುಖ ಆರೋಪಿಗಳಾದ ಲಿನೋ, ಅಯ್ಯಪ್ಪ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಪ್ರಮುಖ ಆರೋಪಿ ಲಿನೋ ಬಿಕಾಂ ವಿದ್ಯಾರ್ಥಿಯಾಗಿದ್ದು, ಈತ ಕೂಡ ಸ್ಥಳೀಯ ನಿವಾಸಿ ಎಂದು ತಿಳಿದುಬಂದಿದೆ. ಉಳಿದಂತೆ ಅಂದು ಲಿನೋ ಜೊತೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆತನ ಸ್ನೇಹಿತನನ್ನು ಆಯ್ಯಪ್ಪ ಎಂದು ಗುರಿತಿಸಲಾಗಿದೆ. ಇದಲ್ಲದೆ ರಾಜು ಮತ್ತು ಚಿನ್ನು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜು ಮತ್ತು ಚಿನ್ನು ಆಸ್ಪತ್ರೆ ಮತ್ತು ಕೊರಿಯರ್ ಡಿಲಿವರಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸ್ ವಿಚಾರಣೆ ವೇಳೆ ಆರೋಪಿಗಳ ಲಿನೋ ಹಾಗೂ ಅಯ್ಯಪ್ಪ ಲೈಂಗಿಕ ದೌರ್ಜನ್ಯಕ್ಕೂ ಮುನ್ನ ಯುವತಿಯನ್ನು ಹಿಂಬಾಲಿಸಿದ್ದ ವಿಚಾರವನ್ನು ಹೇಳಿಕೊಂಡಿದ್ದಾರೆ.
ಹೇಳಿಕೆ ನೀಡಿ ದೂರು ನೀಡದೇ ತೆರಳಿದ ಸಂತ್ರಸ್ತ ಯುವತಿ!
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು ಬಾಣಸವಾಡಿ ಪೊಲೀಸ್ ಠಾಣೆಗೆ ಆಗಮಿಸಿ ಹೇಳಿಕೆ ನೀಡಿದ್ದಾರೆಯಾದರೂ, ಯುವಕರ ವಿರುದ್ಧ ದೂರು ನೀಡಲು ಯುವತಿ ಹಿಂದೇಟು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಮಾಧ್ಯಮಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ವ್ಯಾಪಕ ಸುದ್ದಿಯಾಗುತ್ತಿದ್ದಂತೆಯೇ ಸಂತ್ರಸ್ತ ಯುವತಿ ತನ್ನ ಸ್ನೇಹಿತೆಯೊಂದಿಗೆ ಠಾಣೆಗೆ ಆಗಮಿಸಿ ಹೇಳಿಕೆ ದಾಖಲಿಸಿದ್ದಾರೆ.
ಕಳೆದ ಡಿಸೆಂಬರ್ 31ರ ಮಧ್ಯರಾತ್ರಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿದ್ದ ಲಿನೋ ಮತ್ತು ಅಯ್ಯಪ್ಪ ಎಂಬುವವರು ರಸ್ತೆ ಮಧ್ಯದಲ್ಲಿಯೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು. ಸಮೀಪದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯಾವಳಿಗಳು ಸೆರೆಯಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


