ನೋಟು ರದ್ಧತಿ ಸದುದ್ದೇಶದಿಂದ ಕೂಡಿದೆ: ನಂತರದ ಮೋದಿ ನಡೆ ನಿರಾಸೆ ತಂದಿದೆ: ದೇವೇಗೌಡ
ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ನೋಟು ನಿಷೇಧ ಕ್ರಮ ಸದುದ್ದೇಶದಿಂದ ಕೂಡಿದೆ, ಆದರೆ ಅದರಿಂದ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು...

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ನೋಟು ನಿಷೇಧ ಕ್ರಮ ಸದುದ್ದೇಶದಿಂದ ಕೂಡಿದೆ, ಆದರೆ ಅದರಿಂದ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ ಇದು ದೇಶದ ಜನತೆಗೆ ತೀವ್ರ ನಿರಾಸೆ ಉಂಟು ಮಾಡಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಸರ್ವೋಚ್ಚನಾಯಕ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೋಟು ರದ್ದತಿಯ ನಂತರದ 50 ದಿನಗಳಲ್ಲಿ 60 ನಿರ್ಧಾರಗಳನ್ನು ಮಾಡಲಾಗಿದೆ. ಇದರಿಂದ ಬಡವರು, ರೈತರು, ಕೂಲಿ– ಕಾರ್ಮಿಕರು ಪರದಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರೈತರ 60 ದಿನಗಳ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಪ್ರಧಾನಿ ಪ್ರಕಟಿಸಿದ್ದಾರೆ. ದೇಶದಲ್ಲಿ ಭೀಕರ ಬರಗಾಲ ಇದೆ. ಕೆಲವು ರಾಜ್ಯಗಳಲ್ಲಿ ಪ್ರವಾಹದಿಂದಾಗಿ ಅತಿವೃಷ್ಟಿಯೂ ಉಂಟಾಗಿದೆ. ಬಡ್ಡಿ ಮನ್ನಾದಿಂದ ರೈತರ ಸಂಕಷ್ಟ ಪರಿಹಾರ ಆಗುವುದಿಲ್ಲ. ಡಿಸೆಂಬರ್ 31 ರಂದು ದೇಶವನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು, ಆದರೆ ಅವರ ಮಾತುಗಳ ನನಗೆ ಅರ್ಥವಾಗಲಿಲ್ಲ, ದೇಶದ ಜನತೆಗೆ ಅವರು ಏನು ಸಂದೇಶ ನೀಡಿದರು ಎಂಬುದು ನನಗೆ ತಿಳಿಯಲಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


