ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ: ಜ. 10ರವರೆಗೆ ಆರೋಪಿಗಳು ಪೊಲೀಸ್ ವಶಕ್ಕೆ
ಹೊಸ ವರ್ಷಾಚರಣೆ ವೇಳೆ ಕಮ್ಮನಹಳ್ಳಿಯಲ್ಲಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಜನವರಿ 10ರವರೆಗೂ ಪೊಲೀಸ್ ವಶಕ್ಕೆ ನೀಡಲಾಗಿದೆ.

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಕಮ್ಮನಹಳ್ಳಿಯಲ್ಲಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಜನವರಿ 10ರವರೆಗೂ ಪೊಲೀಸ್ ವಶಕ್ಕೆ ನೀಡಲಾಗಿದೆ.
ನಿನ್ನೆ ಬಂಧಿತರಾಗಿದ್ದ ಆರೋಪಿಗಳಾದ ಲಿನೋ, ಅಯ್ಯಪ್ಪ, ರಾಜು ಮತ್ತು ಚಿನ್ನು ಎಂಬ ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಈ ವೇಳೆ ನ್ಯಾಯಾಧೀಶರು ಅವರನ್ನು 4 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ವಶಕ್ಕೆ ಪಡೆದಿರು ಪೊಲೀಸರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ.
ಪೊಲೀಸರಿಗೆ ಪ್ರಕರಣದ ಸಂಪೂರ್ಣ ಮಾಹಿತಿ ನೀಡಿದ ಸಂತ್ರಸ್ತ ಯುವತಿ
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಇಂದು ಸಂತ್ರಸ್ತ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಾಣಸವಾಡಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಯುವತಿ ಮನೆಗೆ ತೆರಳಿ ಹೇಳಿಕೆ ಪಡೆದಿದ್ದು, ಈ ವೇಳೆ ಯುವತಿ ಆ ಯುವಕರು ತನಗೆ ಪರಿಚಯವಿರಲ್ಲಿಲ್ಲ ಎಂದು ಹೇಳಿಕೊಂಡಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


