ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ಮಡಿಕೇರಿಯಲ್ಲಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ..

ಮಡಿಕೇರಿ: ಮಡಿಕೇರಿಯಲ್ಲಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಏಕೆ ಸಿಬಿಐ ತನಿಖೆಗೆ ವಹಿಸಲಿಲ್ಲ ಎಂಬುದಕ್ಕೆ ಕಾರಣ ನೀಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ
ಸಿ.ಬಿ.ಐ. ತನಿಖೆಗೆ ವಹಿಸಬೇಕೆಂದು ಕೋರಿ, ಗಣಪತಿ ಅವರ ತಂದೆ ಕುಶಾಲಪ್ಪ ಅವರು, ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನ್ಯಾ. ಆದರ್ಶ ಕುಮಾರ್ ಗೋಯೆಲ್ ಹಾಗೂ ಯು.ಯು ಲಲಿತ್ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿ ಆರು ವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ.
ಮಂಗಳೂರು ಐ.ಜಿ ಕಚೇರಿಯಲ್ಲಿ ಡಿ.ವೈ.ಎಸ್.ಪಿ.ಯಾಗಿದ್ದ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ಕಳೆದ ಜುಲೈ 7 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮೊದಲು ತಮ್ಮ ಸಾವಿಗೆ ಕಾರಣರಾದವರ ಹೆಸರನ್ನು ಹೇಳಿದ್ದು, ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣದ ತನಿಖೆ ನಡೆಸಿ ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


