106 ಬಾಲಕೀಯರ ವಿದ್ಯಾರ್ಥಿನಿಲಯಗಳಲ್ಲಿ ಭದ್ರತಾ ಸಿಬ್ಬಂದಿ ಇಲ್ಲ; 605 ರಲ್ಲಿ ಸಿಸಿಟಿವಿ ಕ್ಯಾಮರಾ ಇಲ್ಲ!
ಭದ್ರತಾ ಸಿಬ್ಬಂದಿಗಳಿಲ್ಲದ 106 ಹಾಸ್ಟೆಲ್ ಗಳಿದ್ದರೆ 605 ಹಾಸ್ಟೆಲ್ ಗಳಲ್ಲಿ ಸಿಸಿಟಿವಿ ಕ್ಯಾಮರಾಗಳೇ ಇಲ್ಲದಿರುವುದು ಬೆಳಕಿಗೆ ಬಂದಿದೆ.

Published On :
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸುತ್ತಿರುವ ಬಾಲಕೀಯರ ವಿದ್ಯಾರ್ಥಿನಿಲಯಗಳಲ್ಲಿ ಭದ್ರತಾ ಕ್ರಮಗಳು ಸಮರ್ಪಕವಾಗಿರದೇ ಇರುವ ಮಾಹಿತಿ ಬಹಿರಂಗವಾಗಿದ್ದು, ಭದ್ರತಾ ಸಿಬ್ಬಂದಿಗಳಿಲ್ಲದ 106 ಹಾಸ್ಟೆಲ್ ಗಳಿದ್ದರೆ 605 ಹಾಸ್ಟೆಲ್ ಗಳಲ್ಲಿ ಸಿಸಿಟಿವಿ ಕ್ಯಾಮರಾಗಳೇ ಇಲ್ಲದಿರುವುದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿ ನಿಲಯಗಳಲ್ಲಿ ಎದುರಾಗಿರುವ ಭದ್ರತಾ ಲೋಪದ ಬಗ್ಗೆ ಬಿಜೆಪಿ ಮಹಿಳಾ ಮೋರ್ಚಾ ನಿಯೋಗ ಸಮಾಜ ಕಲ್ಯಾಣ ಇಲಾಖೆ ಹೆಚ್ ಆಂಜನೇಯ ಅವರಿಗೆ ಮನವಿ ಸಲ್ಲಿಸಿದ್ದು, ಸಮಸ್ಯೆಗಳನ್ನು ಹೊಸ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೂ ಮುನ್ನ ಬಗೆ ಹರಿಸುವುದಾಗಿ ಭರವಸೆ ನೀಡಿದ್ದಾರೆ.
ಸಚಿವರು ಭರವಸೆ ಈಡೇರಿಸುವುದಕ್ಕೆ ವಿಫಲರಾದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಮಹಿಳಾ ಮೋರ್ಚಾದ ಅಧ್ಯಕ್ಷರಾದ ಭಾರತೀ ಶೆಟ್ಟಿ ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಭದ್ರತಾ ಸಿಬ್ಬಂದಿCCTV camerasವಿದ್ಯಾರ್ಥಿನಿ ನಿಲಯಸಿಸಿಟಿವಿ ಕ್ಯಾಮರಾSecurity guardsGirls hostels
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


