ರಾಜ್ಯ

ಬೆಂಗಳೂರು: ಜಿಮ್ ನಿಂದ ವಾಪಸಾಗುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ದೂರು ದಾಖಲು

ಕಮ್ಮನ ಹಳ್ಳಿ, ಕೆಜಿ ಹಳ್ಳಿ ಬಳಿಕ ಇದೀಗ ಮತ್ತದೇ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಜಿಮ್ ನಿಂದ ಮನೆಗೆ ತೆರಳುತ್ತಿದ್ದ ಯುವತಿ ಮೇಲೆ ಅಪರಿಚಿತ ದುಷ್ಕರ್ಮಿ ಲೈಂಗಿಕ ದೌರ್ಜನ್ಯ ನಡೆಸಿ ಪರಾರಿಯಾಗಿದ್ದಾನೆ.

ಬೆಂಗಳೂರು: ಜಿಮ್ ನಿಂದ ವಾಪಸಾಗುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ದೂರು ದಾಖಲು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಮ್ಮನ ಹಳ್ಳಿ, ಕೆಜಿ ಹಳ್ಳಿ ಬಳಿಕ ಇದೀಗ ಮತ್ತದೇ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಜಿಮ್ ನಿಂದ ಮನೆಗೆ ತೆರಳುತ್ತಿದ್ದ ಯುವತಿ ಮೇಲೆ  ಅಪರಿಚಿತ ದುಷ್ಕರ್ಮಿ ಲೈಂಗಿಕ ದೌರ್ಜನ್ಯ ನಡೆಸಿ ಪರಾರಿಯಾಗಿದ್ದಾನೆ.

ಜನವರಿ 4 ರಂದು ಘಟನೆ ನಡೆದಿದ್ದು, ಬಾಣಸವಾಡಿ ಪೊಲೀಸ್ ಠಾಣಾ ಸಮೀಪದಲ್ಲಿಯೇ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದುಷ್ಕರ್ಮಿ ಬಂಧನಕ್ಕಾಗಿ  ಪೊಲೀಸರು ಬಲೆ ಬೀಸಿದ್ದಾರೆ.

ಪೊಲೀಸರು ತಿಳಿಸಿರುವಂತೆ ಜನವರಿ 4 ಬುಧವಾರ ಸಂಜೆ ಬಾಣಸವಾಡಿಯ ಗೋಲ್ಡ್ಸ್ ಜಿಮ್ ನಲ್ಲಿ ವ್ಯಾಯಾಮ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಯುವತಿಯನ್ನು ಯುವಕನೋರ್ವ ಚುಡಾಯಿಸಿದ್ದ. ಅಲ್ಲದೇ ನೋಡ  ನೋಡುತ್ತಿದ್ದಂತೆಯೇ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಆಕೆ ಧರಿಸಿದ್ದ ಟೀಶರ್ಟ್ ಎಳೆದಾಡಿದ್ದ. ಘಟನೆಯಿಂದ ಆತಂಕಗೊಂಡ ಯುವತಿ ಕಿರುಚಿಕೊಂಡಿದ್ದು, ಅಕ್ಕಪಕ್ಕದಲಿದ್ದ ಸ್ಥಳೀಯರು ಸಮೀಪಕ್ಕೆ ಧಾವಿಸುತ್ತಿದ್ದಂತೆಯೇ ಆತ  ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.