ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಅಪ್ಪಾಜಿಗೌಡ ವಜಾ!
ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಾ.ಅಪ್ಪಾಜಿಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದ್ದು, ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆದ ಮಹತ್ವದ ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಬೆಂಗಳೂರು: ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಾ.ಅಪ್ಪಾಜಿಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದ್ದು, ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆದ ಮಹತ್ವದ ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಇದೇ ಜನವರಿ 18ಕ್ಕೆ ಸಂಘದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲ್ಲಿದ್ದು, ಅಲ್ಲಿಯವರೆಗೂ ಹಂಗಾಮಿ ಅಧ್ಯಕ್ಷರಾಗಿ ನಾರಾಯಣಮೂರ್ತಿಯವರನ್ನು ಆಯ್ಕೆ ಮಾಡಲಾಗಿದೆ. ನಿನ್ನೆ ನಗರದ ವಿವಿಪುರಂನಲ್ಲಿರುವ ಸಂಘದ ಕಚೇರಿಯಲ್ಲಿ ಸಹಕಾರ ಇಲಾಖೆಯ ಉಪ ನಿಬಂಧಕ ಬಿ.ಬಸಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಟ್ಟು 35 ಮಂದಿ ನಿರ್ದೇಶಕರಲ್ಲಿ 18 ಮಂದಿ ಅಪ್ಪಾಜಿಗೌಡರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಅಧ್ಯಕ್ಷ ಪದವಿಯಿಂದ ಕೆಳಗಿಳಿಸಲಾಗಿದೆ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಒಕ್ಕಲಿಗರ ಸಂಘದ ನಿರ್ದೇಶಕರ ಪೈಕಿ ಅಪ್ಪಾಜಿಗೌಡರ ನಾಯಕತ್ವ ವಿರೋಧಿಸಿ 18 ಜನ ನಿರ್ದೇಶಕರು ಸಹಿ ಹಾಕಿ ಅವಿಶ್ವಾಸ ಮಂಡಿಸಿದ್ದರು. ಸಭೆ ಸಂದರ್ಭದಲ್ಲಿ ಅಧ್ಯಕ್ಷರು ಆಗಮಿಸಿದಾಗ ಅಪ್ಪಾಜಿಗೌಡರ ಪರ ಹಾಗೂ ವಿರೋಧದ ಕಾರ್ಯಕರ್ತರ ನಡುವೆ ಪರಸ್ಪರ ವಾದ-ವಿವಾದ ನಡೆದಿತ್ತು. ಕಳೆದ ಹಲವು ದಿನಗಳಿಂದ ಅಪ್ಪಾಜಿಗೌಡರ ವಿರುದ್ಧ ನಿರ್ದೇಶಕರ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿಂದೆ ಕರೆದಿದ್ದ ಸರ್ವ ಸದಸ್ಯರ ಸಭೆಯಲ್ಲಿ ಅವಿಶ್ವಾಸ ನಿರ್ಣಯ ತಂದಿತ್ತಾದರೂ ಅದರಲ್ಲಿ ಅಪ್ಪಾಜಿಗೌಡ ಗೆದ್ದಿದ್ದರು.
ಪದಚ್ಯುತಿ ನಿರ್ಧಾರವನ್ನು ವಿರೋಧಿಸಿದ ಅಪ್ಪಾಜಿಗೌಡ
ಇನ್ನು ತಮ್ಮನ್ನು ಅಧ್ಯಕ್ಷ ಸ್ಥಾನದಿಂದ ಪದತ್ಯುಚಗೊಳಿಸಿವ ನಿರ್ಧಾರವನ್ನು ವಿರೋಧಿಸಿರುವ ಪದಚ್ಯುತ ಅಧ್ಯಕ್ಷ ಅಪ್ಪಾಜಿಗೌಡ ಅವರು, ತಮ್ಮನ್ನು ಸ್ಥಾನದಿಂದ ಕೆಳಗಿಳಿಸುವ ಅಧಿಕಾರವೇ ಇಲ್ಲ. ಸಂಘದ ಕಾನೂನಿನ ಪ್ರಕಾರ ಅಧ್ಯಕ್ಷರನ್ನು ಪದಚ್ಯುತಗೊಳಿಸಲು 2/3 ನಿರ್ದೇಶಕ, ಪದಾಧಿಕಾರಿಗಳ ನಿರ್ಣಯ ಅಗತ್ಯ. ಹೀಗಾಗಿ ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


