ಮಧ್ಯರಾತ್ರಿಯಿಂದ ಪೆಟ್ರೋಲ್ ಬಂಕ್ ಗಳಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡ್ ಬಳಕೆ ಸ್ಥಗಿತ
ರಾಜ್ಯಾದ್ಯಂತ ಪೆಟ್ರೋಲ್ ಬಂಕ್ ಗಳಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳನ್ನು ಸ್ವೀಕರಿಸದಿರಲು ಪೆಟ್ರೋಲ್ ಬಂಕ್ ಮಾಲೀಕರು ...

ಬೆಂಗಳೂರು: ರಾಜ್ಯಾದ್ಯಂತ ಪೆಟ್ರೋಲ್ ಬಂಕ್ ಗಳಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳನ್ನು ಸ್ವೀಕರಿಸದಿರಲು ಪೆಟ್ರೋಲ್ ಬಂಕ್ ಮಾಲೀಕರು ನಿರ್ಧರಿಸಿದ್ದಾರೆ.
ಕ್ಯಾಶ್ ಲೆಸ್ ವ್ಯವಹಾರಕ್ಕೆ ಸೆಡ್ಡು ಹೊಡೆದಿರುವ ಬಂಕ್ ಮಾಲೀಕರು ಇಂದು ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಬಳಕೆಯನ್ನು ಸ್ಥಗಿತಗೊಳಿಸಲಿದ್ದಾರೆ. ಬ್ಯಾಂಕ್‍ಗಳು ಬಂಕ್ ಮಾಲೀಕರಿಗೆ ಶೇ.1 ರಷ್ಟು ಸರ್ವೀಸ್ ಟ್ಯಾಕ್ಸ್ ಹಾಕುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಪೆಟ್ರೋಲ್ ಬಂಕ್‍ಗಳಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡ್‍ಗಳನ್ನು ಬಳಕೆ ಮಾಡದಿರಲು ನಿರ್ಧರಿಸಲಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷ ಬಿ.ಆರ್ ರವೀಂದ್ರನಾಥ್ ಹೇಳಿದ್ದಾರೆ.
ಜನವರಿ 9 ರಿಂದ ಅಂದರೆ ನಾಳೆ ಬೆಳಗ್ಗೆಯಿಂದ ಸರ್ವೀಸ್ ಟ್ಯಾಕ್ಸ್ ಹಾಕುವುದಾಗಿ ಹೇಳಲಾಗಿದೆ. ಹಾಗಾಗಿ ಇಂದು ಮಧ್ಯರಾತ್ರಿಯಿಂದಲೇ ಕಾರ್ಡ್‍ಗಳ ಬಳಕೆ ಇಲ್ಲ. ಪ್ರಧಾನಿ ಮೋದಿ ಕ್ಯಾಶ್‍ಲೆಸ್ ವ್ಯವಹಾರ ಮಾಡಿ ಅಂತಾ ಹೇಳ್ತಾರೆ. ಪೆಟ್ರೋಲ್ ಬಂಕ್‍ಗಳಲ್ಲಿ ಶೇ.90 ರಷ್ಟು ಕಾರ್ಡ್ ಬಳಕೆ ಮಾಡಲಾಗುತ್ತಿದೆ. ಇದರಿಂದ ಹೇಗೆ ವ್ಯವಹಾರ ಮಾಡೋದು ಅಂತ ರವೀಂದ್ರ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


