ರಾಜ್ಯ

ಯಡಿಯೂರಪ್ಪರನ್ನು ಸಿಎಂ ಮಾಡುವುದು ರಾಯಣ್ಣ ಬ್ರಿಗೇಡ್ ಉದ್ದೇಶವಲ್ಲ: ಈಶ್ವರಪ್ಪ

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದಿದ್ದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ, ಈಗ ಉಲ್ಟಾ ಹೊಡೆದಿದ್ದಾರೆ.

ಯಡಿಯೂರಪ್ಪರನ್ನು ಸಿಎಂ ಮಾಡುವುದು ರಾಯಣ್ಣ ಬ್ರಿಗೇಡ್ ಉದ್ದೇಶವಲ್ಲ: ಈಶ್ವರಪ್ಪ
ಈಶ್ವರಪ್ಪ,
Published On :
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದಿದ್ದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ, ಈಗ ಉಲ್ಟಾ ಹೊಡೆದಿದ್ದಾರೆ. 
ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ, ಯಡಿಯೂರಪ್ಪ ಅವರು ತಾವು ಮುಖ್ಯಮಂತ್ರಿಯಾಗುವುದಕ್ಕೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ  ಬೆಂಬಲ ಬೇಡ ಎಂದಿದ್ದರು. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದು ರಾಯಣ್ಣ ಬ್ರಿಗೇಡ್ ನ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಒಂದು ಸಂಸ್ಥೆಯಾಗಿದ್ದು ಇಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರಿದ್ದಾರೆ ಆದರೆ ಎಂದಿಗೂ ರಾಜಕೀಯ ಪಕ್ಷವಾಗುವುದಿಲ್ಲ. ಮಠಾಧೀಶರ ಸಲಹೆಯಂತೆ ಯಾರಿಗೂ ಬೆಂಬಲ ನೀಡುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.