ಬೆಂಗಳೂರು: ತೆರಿಗೆ ಇಲಾಖೆ ಅಧಿಕಾರಿ ಪತ್ನಿ ಜೊತೆ ಅಸಭ್ಯ ವರ್ತನೆ, ಇಬ್ಬರ ಬಂಧನ
ಹೊಸ ವರ್ಷಾಚರಣೆ ವೇಳೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರನ್ನು ಕಬ್ಬನ್ ಪಾರ್ಕ್ ಪೊಲೀಸರು ...

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್ ಆವರಣದಲ್ಲಿ ಹೊಸ ವರ್ಷದ ಹಿಂದಿನ ದಿನ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯ ಪತ್ನಿ ಭಾಗವಹಿಸಿದ್ದರು. ಈ ವೇಳೆ ಮಧ್ಯ ಸೇವಿಸಿದ್ದ ಯುವಕರ ಗುಂಪೊಂದು ಮಹಿಳೆ ಬಂದು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಸಂಬಂಧ ರಿಚ್ಮಂಡ್ ಟೌನ್ ನ ಶಿವರಾಜು ಮತ್ತು ಭರತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿಗಳ ಸುಳಿವು ಸಿಕ್ಕಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


