ರಾಜ್ಯ

ತುಮಕೂರು: ಮಾನಸಿಕ ಅಸ್ವಸ್ಥೆ ಮೇಲೆ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ

ಚಲಿಸುತ್ತಿದ್ದ ಪೊಲೀಸ್‌ ಜೀಪ್‌ನಲ್ಲೇ 32 ವರ್ಷದ ಮಾನಸಿಕ ಅಸ್ವಸ್ಥೆಯ ಮೇಲೆ ತುಮಕೂರು ಗ್ರಾಮೀಣ ಠಾಣೆಯ ಎಎಸ್ಐ ಉಮೇಶ್ ಅತ್ಯಾಚಾರ ಎಸಗಿದ್ದಾರೆ ...

ತುಮಕೂರು: ಮಾನಸಿಕ ಅಸ್ವಸ್ಥೆ ಮೇಲೆ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ
ಸಾಂದರ್ಭಿಕ ಚಿತ್ರ
Published On :

ತುಮಕೂರು: ಚಲಿಸುತ್ತಿದ್ದ ಪೊಲೀಸ್‌ ಜೀಪ್‌ನಲ್ಲೇ 32 ವರ್ಷದ ಮಾನಸಿಕ ಅಸ್ವಸ್ಥೆಯ ಮೇಲೆ ತುಮಕೂರು ಗ್ರಾಮೀಣ ಠಾಣೆಯ ಎಎಸ್ಐ ಉಮೇಶ್ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಅಮಾನತುಗೊಳಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಮಾನಸಿಕ ಅಸ್ವಸ್ಥರಾಗಿರುವ ಮಹಿಳೆ ಕುಟುಂಬಸ್ಥರ ಜೊತೆ ಜಗಳವಾಡಿಕೊಂಡು ಮನೆಯಿಂದ ಹೊರಗೆ ಬಂದಿದ್ದರು. ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಉಮೇಶ್ ನಗರದ ಅಂತರಸನಹಳ್ಳಿ ಬೈಪಾಸ್‌ ಸೇತುವೆಯ ಹತ್ತಿರ ಈಕೆಯನ್ನು  ನೋಡಿ ಮನೆಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಜೀಪು ಹತ್ತಿಸಿಕೊಂಡಿರುವುದಾಗಿ ಹೇಳಲಾಗಿದೆ.

ಚಲಿಸುತ್ತಿದ್ದ ಜೀಪಿನಲ್ಲೇ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ನಂತರ ಆಕೆಯನ್ನು ಮನೆಯ ಬಳಿ ಬಿಟ್ಟು ಹೋಗಿದ್ದಾಗಿ ಹೇಳಲಾಗಿದೆ.

ನಂತರ ಮಹಿಳೆ ನಡೆದ ವಿಚಾರವನ್ನು ತನ್ನ ತಾಯಿ ಬಳಿ ಹೇಳಿಕೊಂಡಿದ್ದಾಳೆ, ಈ ಸಂಬಂಧ ಮಹಿಳೆಯ ತಾಯಿ ಎಸ್ ಐ ಉಮೇಶ್ ವಿರುದ್ಧ ದೂರು ದಾಖಲುಸಿದ್ದಾರೆ.

ಪ್ರಕರಣ ಸಂಬಂಧ ಆರೋಪಿ ಉಮೇಶ್‌ನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂಥ್ ವಿಚಾರಣೆ ನಡೆಸಿದ್ದಾರೆ.  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಡಿಎಸ್ಪಿ ಚಿದಾನಂದಸ್ವಾಮಿ  ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯನ್ನು ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಉಮೇಶ್‌ನನ್ನು ರಾತ್ರಿ ವೇಳೆಗೆ ಅಮಾನತು ಮಾಡಲಾಯಿತು. ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.