ರಾಜ್ಯ

ಬೆಂಗಳೂರಿನಲ್ಲಿ ಯುವತಿಯಿಂದ ಪ್ರಿಯಕರನ ಮೇಲೆ ಆಸಿಡ್ ದಾಳಿ

ಮದುವೆಯಾಗಲು ನಿರಾಕರಿಸಿದ ಪ್ರಿಯಕರನ ಮೇಲೆ ಯುವತಿಯೊಬ್ಬಳು ಆಸಿಡ್ ಹಾಗೂ ಬ್ಲೇಡ್ ನಿಂದ ದಾಳಿ ನಡೆಸಿದ...

ಬೆಂಗಳೂರಿನಲ್ಲಿ ಯುವತಿಯಿಂದ ಪ್ರಿಯಕರನ ಮೇಲೆ ಆಸಿಡ್ ದಾಳಿ
ಲಿಡಿಯಾ
Published On :
ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಪ್ರಿಯಕರನ ಮೇಲೆ ಯುವತಿಯೊಬ್ಬಳು ಆಸಿಡ್ ಹಾಗೂ ಬ್ಲೇಡ್ ನಿಂದ ದಾಳಿ ನಡೆಸಿದ ಘಟನೆ ಮಂಗಳವಾರ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯುವಕನ ಮೇಲೆ ಆಸಿಡ್ ದಾಳಿ ನಡೆಸಿದ ಯುವತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. 
ಆಸಿಡ್ ದಾಳಿ ನಡೆಸಿದ ಯುವತಿಯನ್ನು ನರ್ಸ್ ಲಿಡಿಯಾ ಎಂದು ಗುರುತಿಸಲಾಗಿದ್ದು, ಕಳೆದ 8 ವರ್ಷಗಳಿಂದ ತಾನು ಪ್ರೀತಿಸುತ್ತಿದ್ದ ಬಟ್ಟೆ ವ್ಯಾಪಾರಿ ಜಯಕುಮಾರ್ ಮೇಲೆ ಆಸಿಡ್ ಮತ್ತು ಬ್ಲೇಡ್ ನಿಂದ ದಾಳಿ ನಡೆಸಿದ್ದಾಳೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಜಯಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಿಡಿಯಾ ಮತ್ತು ಜಯಕುಮಾರ್ ಕಳೆದ 8ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈಗ ಮದುವೆಯಾಗಲು ನಿರಾಕರಿಸಿ ವಂಚಿಸಲು ಮುಂದಾಗಿದ್ದಾನೆ ಎಂದು ಹತಾಶಳಾದ ಲಿಡಿಯಾ ಮುಖಕ್ಕೆ ಚಾಕುವಿನಿಂದ ಇರಿದು ಗಾಯಗೊಳಿಸಿ ಆಸಿಡ್‌ ಎರಚಿ ಮುಖ ವಿರೂಪಗೊಳಿಸಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.