ರಾಜ್ಯ

ಹುಬ್ಬಳ್ಳಿ ರೈಲು ನಿಲ್ದಾಣದ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು!

ಹುಬ್ಬಳ್ಳಿ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಹುಬ್ಬಳ್ಳಿ ರೈಲು ನಿಲ್ದಾಣದ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು!
ಹಳಿ ತಪ್ಪಿದ ಗೂಡ್ಸ್ ರೈಲು
Published On :

ಹುಬ್ಬಳ್ಳಿ: ಹುಬ್ಬಳ್ಳಿ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಗೂಡ್ಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದ್ದು, ರೈಲು ಹಳಿ ತಪ್ಪಲು ನಿಖರ ಕಾರಣ ತಿಳಿದುಬಂದಿಲ್ಲ. ಪ್ರಸ್ತುತ ಘಟನಾ ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ರೈಲು ಹಳಿ ತಪ್ಪಿರುವುದರಿಂದ  ಸುತ್ತಮುತ್ತಲ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.

ಹೀಗಾಗಿ ರೈಲನ್ನು ಹಳಿ ಮೇಲೆ ಕೂರಿಸುವ ಕಾರ್ಯ ಭರದಿಂದ ಸಾಗಿದ್ದು, ಸ್ಥಳಕ್ಕೆ ರೈಲ್ವೇ ಸುರಕ್ಷತಾ ಅಧಿಕಾರಿಗಳು ಭೇಟಿ ನೀಡಿ ಹಳಿ ತಪ್ಪಲು ಕಾರಣವಾದ ಅಂಶಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.