ರಾಜ್ಯ

ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ತಾಯಿ, ಮಗಳ ಮೇಲೆ ಮೃಗೀಯ ವರ್ತನೆ: 6 ಜನರ ಬಂಧನ

ಪ್ರೇಮಿಯೊಬ್ಬನಿಗೆ ಆಶ್ರಯ ನೀಡಿದ ಕಾರಣಕ್ಕಾಗಿ ಮಹಿಳೆ ಹಾಗೂ ಆಕೆಯ ಮಗಳನ್ನು ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ಮೃಗೀಯವಾಗಿ ವರ್ತಿಸಿದ ಅಮಾನವೀಯ ಘಟನೆ ಸಂಬಂಧ ನಗರದ ಪೊಲೀಸರು 6 ಮಂದಿ ಆರೋಪಿಗಳನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...

ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ತಾಯಿ, ಮಗಳ ಮೇಲೆ ಮೃಗೀಯ ವರ್ತನೆ: 6 ಜನರ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪ್ರೇಮಿಯೊಬ್ಬನಿಗೆ ಆಶ್ರಯ ನೀಡಿದ ಕಾರಣಕ್ಕಾಗಿ ಮಹಿಳೆ ಹಾಗೂ ಆಕೆಯ ಮಗಳನ್ನು ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ಮೃಗೀಯವಾಗಿ ವರ್ತಿಸಿದ ಅಮಾನವೀಯ ಘಟನೆ ಸಂಬಂಧ ನಗರದ ಪೊಲೀಸರು 6 ಮಂದಿ ಆರೋಪಿಗಳನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಜನವರಿ. 15 ರಂದು ನಂದಿನ ಲೇಔಟ್ ನಲ್ಲಿ ನಡೆಸಿದಿದ್ದ ಪ್ರಕರಣ ಸಂಬಂಧ ಮಹಿಳೆಯರು ಸೇರಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಖಾಸೀಮ್ (32), ಯಾಸಿನ್ ತಾಜ್ (34), ಇಂದ್ರಮ್ಮ (52), ಇಮ್ರಾನ್ ಪಾಷಾ (28), ಜಬಿ ಉಲ್ಲಾಹ್ (33) ಎಂದು ಗುರ್ತಿಸಲಾಗಿದ್ದು ಮತ್ತೊಬ್ಬರ ಹೆಸರನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.

ಸಂತ್ರಸ್ಥ ಮಹಿಳೆಯರು ಅನಾಥ ಯುವಕನೊಬ್ಬನಿಗೆ ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದರು. ಯುವಕ ಆರೋಪಿಗಳ ಮನೆಯಲ್ಲಿದ್ದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಮಗರ ಪ್ರೀತಿಗೆ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜನವರಿ 15 ರಂದು ಪ್ರೇಮಿಗಳಿಬ್ಬರು ಮನೆಬಿಟ್ಟು ಹೋಗಿದ್ದಾರೆ.

ಇದಕ್ಕೆ ತೀವ್ರವಾಗಿ ಕೆಂಡಾಮಂಡಲವಾಗಿರುವ ಯುವತಿಯ ಮನೆಯವರು ಆಶ್ರಯ ನೀಡಿದ್ದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮೃಗೀಯ ರೀತಿಯಲ್ಲಿ ವರ್ತಿಸಿದ್ದಾರೆ. ತಾಯಿ ಮತ್ತು ಮಗಳನ್ನು ಅಪಹರಿಸಿದ್ದ ಆರೋಪಿಗಳು ಕೆ.ಆರ್.ಪುರಂನಲ್ಲಿರುವ ಟಿನ್ ಫ್ಯಾಕ್ಟರಿ ಬಳಿಯಿರುವ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ, ಇಬ್ಬರನ್ನು ವಿವಸ್ತ್ರಗೊಳಿಸಿದ ಆರೋಪಿಗಳು ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ಮೃಗೀಯ ರೀತಿಯಲ್ಲಿ ವರ್ತಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ತಾಯಿ ಮಗಳು ಇಬ್ಬರು ಪೊಲೀಸರಿಗೆ ದೂರು ನೀಡಿದ್ದರು. ನಂದಿ ನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಸ್ತುತ ತನಿಖೆ ಪ್ರಗತಿಯಲ್ಲಿದ್ದು, ಈವರೆಗೂ 6 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.