ಕಾರ್ಯಕಾರಿಣಿಯಲ್ಲೇ ಬಿಜೆಪಿ ನಾಯಕ ಪೊಲೀಸ್ ವಶಕ್ಕೆ; ವಿಚಾರಣೆ ನಂತರ ಬಿಡುಗಡೆ
ಮಹಿಳೆಗೆ ವಂಚನೆ ಮಾಡಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲೇ...

Published On :
ಕಲಬುರಗಿ: ಮಹಿಳೆಗೆ ವಂಚನೆ ಮಾಡಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲೇ ಬಿಜೆಪಿ ನಾಯಕರೊಬ್ಬರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದು ಪಕ್ಷಕ್ಕೆ ಮತ್ತಷ್ಟು ಮುಜುಗರ ತಂದಿಟ್ಟಿದೆ.
ಬೆಂಗಳೂರಿನ ಉಪ್ಪಾರಪೇಟೆ ಠಾಣೆಯ ಪೊಲೀಸರು ಇಂದು ಕಲಬುರಗಿಯಲ್ಲಿ ಬಿಜೆಪಿ ರಾಷ್ಟ್ರೀಯ ಎಸ್‌ಸಿ ಮೋರ್ಚಾ ಸದಸ್ಯರಾಗಿರುವ ವೆಂಕಟೇಶ್ ಮೌರ್ಯ ಅವರನ್ನು ವಶಕ್ಕೆ ಪಡೆದು, ಪ್ರಕರಣ ಸಂಬಂಧ ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದ್ದಾರೆ.
2011 ರಲ್ಲಿ ಮೌರ್ಯ ವಿರುದ್ಧ ಮಹಿಳೆಯೊಬ್ಬರು ವಂಚನೆ ಪ್ರಕರಣ ದಾಖಲಿಸಿದ್ದರು. ಆಬಳಿಕ ಪೊಲೀಸರು ಇಬ್ಬರ ನಡುವೆ ಸಂಧಾನಕ್ಕೆ ಯತ್ನಿಸಿದ್ದರಾದರೂ ಮಾತುಕತೆ ವಿಫಲವಾಗಿತ್ತು. ಬಳಿಕ ತಲೆ ಮರೆಸಿಕೊಂಡಿದ್ದ ಮೌರ್ಯ ಅವರು ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗಿಯಾಗುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


