ಸರ್ಕಾರದ ಹೊಸ ಆರೋಗ್ಯಸೇವೆ ಯೋಜನೆಯಿಂದ ಬಡರೋಗಿಗಳಿಗೆ ಸಂಕಷ್ಟ
ಬರುವ ಏಪ್ರಿಲ್ 1 ರಿಂದ ಅವಶ್ಯಕತೆ ಇರುವ ರೋಗಿಗಳಿಗೆ ಸರ್ಕಾರದ ವೆಚ್ಚದಲ್ಲಿ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುವ ಯೋಜನೆ ಜಾರಿಗೆ ತರಲು ..

ಬೆಂಗಳೂರು: ಬರುವ ಏಪ್ರಿಲ್ 1 ರಿಂದ ಅವಶ್ಯಕತೆ ಇರುವ ರೋಗಿಗಳಿಗೆ ಸರ್ಕಾರದ ವೆಚ್ಚದಲ್ಲಿ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುವ ಯೋಜನೆ ಜಾರಿಗೆ ತರಲು ಉದ್ದೇಶಿಸಿದೆ.
ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಚಿಕಿತ್ಸೆ ನೀಡಲು ಅವಶ್ಯಕತೆ ಇರುವ ಸೌಲಭ್ಯ ಇಲ್ಲದ ಕಾರಣ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡುವಂತೆ ಶಿಫಾರಸು ಪತ್ರ ನೀಡಲಿದೆ.
ವಿವಿಧ ಆರೋಗ್ಯ ವಿಮಾ ಯೋಜನಗೆಳಡಿ ಖಾಸಗಿ ಆಸ್ಪತ್ರೆಗಳು ನೀಡುವ ಚಿಕಿತ್ಸೆಗೆ ಸರ್ಕಾರ ವೆಚ್ಚ ಭರಿಸಲಿದೆ. ಬಿಪಿಎಲ್ ಕಾರ್ಡ್, ಎಪಿಎಲ್ ಕಾರ್ಡ್ ಮತ್ತು ಸರ್ಕಾರಿ ಸಿಬ್ಬಂದಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ತಮಗೆ ಅನುಕೂಲವಿರುವ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ರೋಗಿಗಳು ಸರ್ಕಾರದ ಶಿಫಾರಸು ಪತ್ರ ತೆಗೆದುಕೊಂಡು ಖಾಸಗಿ ಆಸ್ಪತ್ರೆಗಳಿಗೆ ನೀಡಬೇಕಾಗುತ್ತದೆ.ಸರ್ಕಾರದ ಈ ಹೊಸ ಯೋಜನೆ ಜಾರಿಯಾದರೇ ಬಡ ರೋಗಿಗಳು ಕೂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸಾ ಸೇವಾ ಸೌಲಭ್ಯಗಳನ್ನು ಪಡೆಯಬಹದಾಗಿದೆ. ಸರ್ಕಾರ ಬಾಕಿ ಪಾವತಿಸದ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಮೂರು ಪ್ರಮುಖ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಸರ್ಕಾರ ಬಾಕಿ ಪಾವತಿಸದ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಮೂರು ಪ್ರಮುಖ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿದೆ.ವಾಜಿಪೇಯಿ ಆರೋಗ್ಯ ಶ್ರೀ, ರಾಜೀವ್ ಗಾಂಧಿ ಆರೋಗ್ಯ ಭಾಗ್ಯ ಮತ್ತು ಜ್ಯೋತಿ ಸಂಜೀವಿನಿ ಯೋಜನೆಯಡಿ ಈಗಾಗಲೇ ನೀಡಿರುವ ಸೇವೆಗೆ ಸರ್ಕಾರ ಬಾಕಿ ಉಳಿಸಿಕೊಂಡಿರುವ ಹಣ ಬಿಡುಗಡೆ ಮಾಡುವ ತನಕ ಉಚಿತ ಸೇವೆ ಸ್ಥಗಿತಗೊಳಿಸಲಾಗಿದೆ.
ಆಂತರಿಕವಾಗಿ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಿರುವ ಪತ್ರದಲ್ಲಿ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್‌ಗಳ ಸಂಘ, ರೋಗಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಮುಷ್ಕರ ನಡೆಸಲು ತಿಳಿಸಿದೆ. ತುರ್ತು ಚಿಕಿತ್ಸೆ ನೀಡಿ ನಂತರ ಬೇಕಿದ್ದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ರೋಗಿಗಳನ್ನು ಕಳುಹಿಸಿಕೊಡುವಂತೆದೆ. ಆದರೆ 150 ಆಸ್ಪತ್ರೆಗಳು ಮಾಡುತ್ತಿದ್ದ ಕೆಲಸವನ್ನು 20 ತುರ್ತು ಸೇವೆ ಘಟಕ ಮಾಡುತ್ತಿರುವುದು ಹೆಚ್ಚಿನ ಹೊರೆಯಾಗುತ್ತದೆ.
ತುರ್ತು ಸೇವೆಗೆ ತೊಂದರೆ ಆಗಿಲ್ಲ, ಹೆರಿಗೆ. ಅಪಘಾತ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಸೇವೆಗಳು ದೊರೆಯುತ್ತಿವೆ, ಮಾರ್ಚ್ 31 ರೊಳಗೆ ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


