ರಾಜ್ಯ

'ಬಾಲ್ಯ ವಿವಾಹ' ಮುಕ್ತ ರಾಜ್ಯ ಸರ್ಕಾರದ ಗುರಿ: ಸಿದ್ದರಾಮಯ್ಯ

ಮುಂದಿನ ಐದು ವರ್ಷಗಳಲ್ಲಿ ಬಾಲ್ಯ ವಿವಾಹ ಮುಕ್ತ ರಾಜ್ಯವಾಗಿರುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ...

'ಬಾಲ್ಯ ವಿವಾಹ' ಮುಕ್ತ ರಾಜ್ಯ ಸರ್ಕಾರದ ಗುರಿ: ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಬಾಲ್ಯ ವಿವಾಹ ಮುಕ್ತ ರಾಜ್ಯವಾಗಿರುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಏರ್ಪಜಿಸಿದ್ದ ರಾಜ್ಯ ಮಟ್ಚದ ಜಾಗೃತಿ ಆಂದೋಲನ ಮತ್ತು 'ಕರೆ' ವೆಬ್ ಸೈಟ್ ಗೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಅವರು, ಕಳೆದ 10 ವರ್ಷಕ್ಕೆ ಹೋಲಿಕೆ ಮಾಡಿದರೆ, ಬಾಲ್ಯ ವಿವಾಹ ಸಂಖ್ಯೆ ಕಡಿಮೆಯಾಗಿದೆ, ಶೇ.41.2 ರಿಂದ 23.2 ಕ್ಕೆ ಇಳಿದಿದೆ. ಮುಂದಿನ ಐದು ವರ್ಷಗಳಳೊಳಗಾಗಿ ರಾಜ್ಯವನ್ನು ಬಾಲ್ಯವಿವಾಹ ಮುಕ್ತ ರಾಜ್ಯವಾಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಬಾಲ್ಯ ವಿವಾಹ ಈಗಾಗಲೇ ರಾಜ್ಯದಲ್ಲಿ ಇಳಿಕೆಯಾಗುತ್ತಿದ್ದು, ಮುಂಬರುವ ಐದು ವರ್ಷದಲ್ಲಿ ರಾಜ್ಯ ಬಾಲ್ಯವಿವಾಹ ಮುಕ್ತ ರಾಜ್ಯವಾಗಿ ಹೊರಹೊಮ್ಮಲಿದೆ. ಪ್ರಸ್ತುತ ರಾಜ್ಯದಲ್ಲಿ ಪುರುಷ ಹಾಗೂ ಮಹಿಳೆಯರ ಅನುಪಾತ 1000:936ರಷ್ಟಿದೆ. ಹೆಣ್ಣು ಭ್ರೂಣಹತ್ಯೆ ಹಾಗೂ ಬಾಲ್ಯ ವಿವಾಹವನ್ನು ತೊಲಗಿಸುವುದರಿಂದ ಪುರುಷ ಹಾಗೂ ಮಹಿಳೆಯರ ಅನುಪಾತ ಅಭಿವೃದ್ಧಿಗೊಳ್ಳಲಿದೆ. ಆಸ್ತಿಯ ಮೇಲೆ ಮಹಿಳೆಯರಿಗೂ ಹಕ್ಕಿದೆ ಎಂಬುದನ್ನು ಎಲ್ಲರೂ ನೆನಪಿಟ್ಟುಕೊಳ್ಳಬೇಕಿದೆ.

ಬೆಳೆಯುವ ಮಕ್ಕಳು ಜ್ಞಾನವನ್ನು ಸಂಪಾದಿಸುತ್ತಿರುತ್ತಾರೆ. ಈ ವೇಳೆ ಅವರಿಗೆ ಮದುವೆ ಮಾಡುವುದಿರಂದ ಇದು ಮಕ್ಕಳ ಮೇಲೆ ಗಂಭೀರವಾದ ಪರಿಣಾಮ ಬೀರುತ್ತದೆ. ಬಾಲ್ಯ ವಿವಾಹ ಮಕ್ಕಳ ಭವಿಷ್ಯ ಹಾಗೂ ಜೀವನವನ್ನು ಹಾಳು ಮಾಡುತ್ತದೆ. ಹೀಗಾಗಿ ಜಾಗೃತಿ ಮೂಡಿಸುವಲ್ಲಿ ಅಧಿಕಾರಿಗಳು ಸೂಕ್ತಯ ಜವಾಬ್ದಾರಿಗಳನ್ನು ತೆಗೆದುಕೊಳ್ಳಬೇಕಿದೆ ಹಾಗೂ ಮಕ್ಕಳ ಪೋಷಕರೂ ಕೂಡ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಿದೆ. ಬಾಲ್ಯವಿವಾಹದಂತಹ ಘಟನೆಗಳು ಬಗ್ಗೆ ಸಾರ್ವಜನಿಕರೂ ಕೂಡ ಎಚ್ಚರ ವಹಿಸಬೇಕಿದ್ದು, ಈ ರೀತಿಯ ಘಟನೆಗಳು ನಡೆದಾಗ ಅಧಿಕಾರಿಗಳಿಗೆ ಮಾಹಿತಿ ನೀಡಬೇಕಿದೆ. ಇದರಿಂದ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.