ರಾಜ್ಯ

ಕಂಬಳಕ್ಕಾಗಿ ಸುಗ್ರೀವಾಜ್ಞೆ ತರಲು ಸಿದ್ಧರಿದ್ದೇವೆ: ಸಿಎಂ ಸಿದ್ದರಾಮಯ್ಯ

ಕಂಬಳಕ್ಕಾಗಿ ಸುಗ್ರೀವಾಜ್ಞೆ ತರಲೂ ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಂಬಳಕ್ಕಾಗಿ ಸುಗ್ರೀವಾಜ್ಞೆ ತರಲು ಸಿದ್ಧರಿದ್ದೇವೆ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಮೈಸೂರು: ಕಂಬಳಕ್ಕಾಗಿ ಸುಗ್ರೀವಾಜ್ಞೆ ತರಲೂ ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಕಂಬಳದ ವಿರೋಧಿಯಲ್ಲ, ಕರಾವಳಿ ತೀರದ ಗ್ರಾಮೀಣ ಕ್ರೀಡೆಯಾದ ಕಂಬಳವನ್ನು ನಮ್ಮ ಸರ್ಕಾರ ಪ್ರೋತ್ಸಾಹಿಸುತ್ತದೆ.

ಕಂಬಳದ ನಿಷೇಧ ವಿವಾದ ಸದ್ಯ ಹೈಕೋರ್ಟ್ ನಲ್ಲಿದೆ. ಹಾಗಾಗಿ ಹೈಕೋರ್ಟ್ ತೀರ್ಪು ಬಂದ ನಂತರ ಸುಗ್ರೀವಾಜ್ಞೆ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.ಅಲ್ಲದೇ ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಯೇ ಬೇರೆ, ಕಂಬಳವೇ ಬೇರೆ, ಅದನ್ನು, ಇದನ್ನು ಹೋಲಿಕೆ ಮಾಡಬೇಡಿ ಎಂದು ಸಿಎಂ ಹೇಳಿದರು.

ಫೆಬ್ರವರಿ 6ರಂದು ಆರಂಭವಾಗುವ ವಿಧಾನಸಭೆ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನು ಎರಡು ಮೂರು ದಿನಗಳಲ್ಲಿ, ಸೇವಾಹಿರಿತನದ ಆಧಾರದ ಮೇಲೆ ಡಿಜಿ ಮತ್ತು ಐಜಿಪಿಗಳನ್ನು ನೇಮಕ ಮಾಡಲಾಗುವುದು ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.