ರಾಜ್ಯ

ಪೋಷಕರು ಒಪ್ಪಿದರೇ ಮಾತ್ರ 2ನೇ ಬಾರಿಗೆ ಲಸಿಕೆ ಹಾಕುವುದು: ತನ್ವೀರ್ ಸೇಠ್

ಪೋಷಕರ ಅನುಮತಿಯಿಲ್ಲದೇ ಯಾವುದೇ ಮಕ್ಕಳಿಗೆ ಬಲವಂತವಾಗಿ ನದಡಾರ ಮತ್ತು ರುಬೆಲ್ಲಾ ಲಸಿಕೆ ಹಾಕುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ .,..

ಪೋಷಕರು ಒಪ್ಪಿದರೇ ಮಾತ್ರ 2ನೇ ಬಾರಿಗೆ ಲಸಿಕೆ ಹಾಕುವುದು: ತನ್ವೀರ್ ಸೇಠ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪೋಷಕರ ಅನುಮತಿಯಿಲ್ಲದೇ ಯಾವುದೇ ಮಕ್ಕಳಿಗೆ ಬಲವಂತವಾಗಿ ನದಡಾರ ಮತ್ತು ರುಬೆಲ್ಲಾ ಲಸಿಕೆ ಹಾಕುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನ ಫೆ. 7ರಿಂದ 28 ರವರೆಗೆ ನಡೆಯಲಿದ್ದು ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಲು ಅವಕಾಶ ನೀಡಬೇಕೆಂದು ಹೇಳಿದ್ದಾರೆ.

ಶಾಲಾ ಆಡಳಿತ ಮಂಡಳಿ ಜೊತೆ ನಾವು ಎರಡು ಸುತ್ತಿನ ಮಾತುಕತೆ ನಡೆಸಿದ್ದೇವೆ. ಜೊತೆಗ ಪೋಷಕರ ಮನವೊಲಿಸಲು ನಾವು ಪ್ರಯತ್ನಿಸುವುದಾಗಿ ಅವರು ಹೇಳಿದ್ದಾರೆ. ಹಲವು ಪೋಷಕರು ಈಗಾಗಲೇ ತಮ್ಮ ಮಕ್ಕಳಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆ ಹಾಕಿಸಿದ್ದು ಮತ್ತೊಂದು ಸುತ್ತು ಲಸಿಕೆ ಹಾಕಿಸಲು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ.

ರಾಜ್ಯದಲ್ಲಿ 1.65 ಕೋಟಿ ಮಕ್ಕಳಿಗೆ ಲಸಿಕೆ ಹಾಕಲು ಉದ್ದೇಶಿಸಲಾಗಿದೆ.  9 ತಿಂಗಳಿಂದ 15 ವರ್ಷದ ಮಕ್ಕಳು ತಮ್ಮ ಪೋಷಕರ ಜೊತೆ ಬಂದು ಲಸಿಕೆ ಹಾಕಿಸಬೇಕು. ಹಳ್ಳಿ, ಪಟ್ಟಣಗಳಲ್ಲಿರುವ ಎಲ್ಲ ಆರೋಗ್ಯ ಸಂಸ್ಥೆಗಳು, ಶಾಲೆಗಳು, ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ತಿಳಿಸಿದ್ದಾರೆ. ಲಸಿಕೆ ಹಾಕಲು ಅವಕಾಶ ನೀಡದ ಖಾಸಗಿ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸರ್ಕಾರವು ಆರೋಗ್ಯ ಯೋಜನೆಗಳ ಹಣ ಬಿಡುಗಡೆ ಮಾಡಿಲ್ಲ ಎಂದು ಒಂದೆರಡು ಪ್ರತಿಷ್ಠಿತ ಆಸ್ಪತ್ರೆಗಳು ಸೇವೆ ಸ್ಥಗಿತಗೊಳಿಸಿವೆ. ಅಂಥ ಆಸ್ಪತ್ರೆಗಳನ್ನು ಸರ್ಕಾರಿ ಆರೋಗ್ಯ ಸೇವೆಗಳ ಪಟ್ಟಿಯಿಂದ ತೆಗೆದು ಹಾಕಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.