ರಾಜ್ಯ

ಐಟಿ ದಾಳಿ ಎಫೆಕ್ಟ್: ಸಚಿವ ರಮೇಶ್ ಜಾರಕಿಹೊಳಿಗೆ ಕೊಕ್? ಸತೀಶ್ ಗೆ ಸ್ಥಾನ ಸಾಧ್ಯತೆ

ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ...

ಐಟಿ ದಾಳಿ ಎಫೆಕ್ಟ್: ಸಚಿವ ರಮೇಶ್ ಜಾರಕಿಹೊಳಿಗೆ ಕೊಕ್? ಸತೀಶ್ ಗೆ ಸ್ಥಾನ ಸಾಧ್ಯತೆ
ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್
Published On :

ಬೆಂಗಳೂರು:  ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬೇನಾಮಿ ಆಸ್ತಿ ಪತ್ತೆ ಹಚ್ಚಿರುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ತಲೆ ನೋವಾಗಿ ಪರಿಣಮಿಸಿದೆ.

162 ಕೋಟಿ ಬೇನಾಮಿ ಆಸ್ತಿ ಸಂಬಂಧ ಈ ಇಬ್ಬರು ನಾಯಕರಿಂದಲೂ ಪಕ್ಷ ವಿವರಣೆ ಕೇಳಿದೆ. ಸಚಿವ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆದು ಅವರ ಸ್ಥಾನಕ್ಕೆ ಸಹೋದರ ಸತೀಶ್ ಜಾರಕಿಹೊಳಿ ಅವರನ್ನು ನೇಮಿಸುವ ಸಾಧ್ಯತೆಗಳು ದಟ್ಟವಾಗಿವೆ. ಬುಧವಾರ ಸತೀಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮನೆ ಮೇಲೆ ನಡೆದಿರು ಐಟಿ ದಾಳಿ ರಾಜಕೀಯ ಪ್ರೇರಿತವಾದದ್ದು. ಇದೆಲ್ಲಾ ವಿರೋಧ ಪಕ್ಷ ಹಾಗೂ ನರೇಂದ್ರ ಮೋದಿ ಸರ್ಕಾರದ ಕುತಂತ್ರ ಎಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಸಣ್ಣ ಕೈಗಾರಿಕೆ ಸಚಿವ ರಮೇಶ್‌ ಜಾರಕಿಹೊಳಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಯಾಗಿದ್ದರಿಂದ ಅವರ ರಾಜೀನಾಮೆ ತೆಗೆದುಕೊಳ್ಳಬೇಕು ಎಂಬ ಒತ್ತಡ ಆಡಳಿತಾರೂಢ ಕಾಂಗ್ರೆಸ್‌ನಲ್ಲೆ ವ್ಯಕ್ತವಾಗಿದೆ. ಆದರೆ, ಜಾರಕಿಹೊಳಿ ಅವರನ್ನು ಸಮರ್ಥಿಸಿಕೊಳ್ಳುವ ಯತ್ನ ಉನ್ನತ ಮಟ್ಟದಲ್ಲೆ ನಡೆಯುತ್ತಿದೆ. ಇತ್ತೀಚೆಗೆ ರಾಸಲೀಲೆ ಪ್ರಕರಣದಲ್ಲಿ ಎಚ್‌.ವೈ. ಮೇಟಿ ಅವರಿಂದ ರಾಜೀನಾಮೆ ಪಡೆಯಲಾಗಿತ್ತು.  ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರು ರಮೇಶ್‌ ಜಾರಕಿಹೊಳಿ ಅವರನ್ನು ಸಂಪರ್ಕಿಸಿ ವಿವರಣೆ ಪಡೆದುಕೊಂಡಿದ್ದಾರೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿ, ರಾಜೀನಾಮೆ  ನೀಡಲು ಸಿದ್ಧವಾಗಿರಬೇಕು ಎಂದು ಪರಮೇಶ್ವರ್ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ,

ಅಕ್ರಮ ಸಂಪತ್ತು ಹೊಂದಿದವರು ಯಾವುದೇ ಪಕ್ಷಕ್ಕೆ ಸೇರಿರಲಿ. ಮುಲಾಜಿಲ್ಲದೇ ಅವರಿಗೆ ಶಿಕ್ಷೆ ವಿಧಿಸಬೇಕು ಎಂದು ಆರೋಗ್ಯ ಸಚಿವ ರಮೇಶ್‌ಕುಮಾರ್‌ ಹೇಳಿಕೆ ನೀಡಿದ್ದಾರೆ. ಇನ್ನು ಈ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿರುವ ಸಿಎಂ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಮನೆ ಮೇಲೆ ನಡೆದಿರು ಐಟಿ ದಾಳಿ ವಿಷಯದ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.