ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆ.ಜಿ. ಗೆ ರು 1.5 ದರದಲ್ಲಿ ಮೇವು: ಸಿದ್ದರಾಮಯ್ಯ
ರಾಜ್ಯದಲ್ಲಿ ಬರ ಪರಿಸ್ಥಿತಿಯಿದ್ದು ಮೇವು ಬ್ಯಾಂಕ್‌ನಲ್ಲಿ ಕೆ.ಜಿಗೆ ರು. 1.5 ದರದಲ್ಲಿ ರೈತರಿಗೆ ಮೇವು ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ...

ಮೈಸೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯಿದ್ದು ಮೇವು ಬ್ಯಾಂಕ್‌ನಲ್ಲಿ ಕೆ.ಜಿಗೆ ರು. 1.5 ದರದಲ್ಲಿ ರೈತರಿಗೆ ಮೇವು ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮೈಸೂರಿನಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಮೇವಿನ ದರ ಇಳಿಕೆ ಬಗ್ಗೆ ಸುತ್ತೋಲೆ ಹೊರಡಿಸಲಾಗುವುದು ಎಂದರು. ಸರ್ಕಾರವು ಕೆ.ಜಿಗೆ 6 ರು. ದರದಲ್ಲಿ ಖರೀದಿಸಿ, 3 ರುಪಾಯಿಯಂತೆ ವಿತರಿಸುತ್ತಿದೆ. ರೈತರ ಹಿತದೃಷ್ಟಿಯಿಂದ ವಿತರಣೆ ದರ ಇಳಿಕೆ ಮಾಡಲಾಗಿದೆ. ಉಚಿತವಾಗಿ ವಿತರಿಸಿದರೆ, ದುರುಪಯೋಗವಾಗುವ ಸಾಧ್ಯತೆ ಇದೆ. ಹೀಗಾಗಿ, ದರ ನಿಗದಿಪಡಿಸಲಾಗಿದೆ ಎಂದು ಹೇಳಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಗ್ರಾಮ ಲೆಕ್ಕಾಧಿಕಾರಿಯಿಂದ ಪ್ರತಿ ಗ್ರಾಮದಲ್ಲಿರುವ ಜಾನುವಾರುಗಳ ಸಂಖ್ಯೆ, ಅಗತ್ಯ ಮೇವಿನ ಪ್ರಮಾಣದ ಮಾಹಿತಿ ಸಂಗ್ರಹಿಸಿ, ಅದರ ಆಧಾರದಲ್ಲಿ ಅಂದಾಜು ಪಟ್ಟಿ ಸಿದ್ಧಪಡಿಸಬೇಕು. ಹೊರರಾಜ್ಯಗಳಿಗೆ ಮೇವು ಸಾಗಣೆಯಾಗದಂತೆ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಪಂಪ್‌ಸೆಟ್ ಇರುವ ರೈತರಿಗೆ ಮೇವುಕಿಟ್ ನೀಡಿ ಮೇವು ಬೆಳೆಸಿ, ಅವರಿಂದ ಖರೀದಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


