ರಾಜ್ಯ

ಶೀಘ್ರದಲ್ಲೇ ಲಲಿತಾ ಮಹಲ್ ಪ್ಯಾಲೆಸ್ ಹೊಟೇಲ್ ಬಂದ್ ಸಾಧ್ಯತೆ

ಮೈಸೂರಿನ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಪ್ರತಿಷ್ಠಿತ ಪಂಚತಾರಾ ಹೊಟೇಲ್ ಲಲಿತ್ ಮಹಲ್ ಅರಮನೆಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಕೇಂದ್ರ...

ಶೀಘ್ರದಲ್ಲೇ ಲಲಿತಾ ಮಹಲ್ ಪ್ಯಾಲೆಸ್ ಹೊಟೇಲ್ ಬಂದ್ ಸಾಧ್ಯತೆ
ಲಲಿತ್ ಮಹಲ್
Published On :
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಪ್ರತಿಷ್ಠಿತ ಪಂಚತಾರಾ ಹೊಟೇಲ್ ಲಲಿತ್ ಮಹಲ್ ಅರಮನೆಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. 
ಲಲಿತ್ ಮಹಲ್ ರಾಜ್ಯ ಸರ್ಕಾರದ ಆಸ್ತಿಯಾಗಿದ್ದು ಖಾಸಗಿಯವರಿಗೆ ಮಾರಾಟ ಮಾಡಲು ಗ್ರೀನ್ ಸಿಗ್ನಲ್ ನೀಡುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಮೇಲೆ ಒತ್ತಡ ಹೇರುತ್ತಿದೆ ಎನ್ನಲಾಗಿದೆ. ಇದಕ್ಕೆ ರಾಜ್ಯ ಸರ್ಕಾರ ತೀವ್ರ ಪ್ರತಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ತೆರೆಮರೆಯಲ್ಲಿ ಸಂಘರ್ಷ ನಡೆಯುತ್ತಿದೆ. 
1974 ರಲ್ಲಿ ಲಲಿತ್ ಮಹಲ್ ಪಂಚತಾರಾ ಹೊಟೇಲ್ ಅನ್ನು ಕೇಂದ್ರದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಐಟಿಡಿಸಿ) ನಡೆಸುತ್ತಿದೆ. ನೂರಾರು ಕೋಟಿ ಬೆಲೆ ಬಾಳುವ ಈ ಅರಮನೆಯನ್ನು ರಾಜ್ಯ ಸರ್ಕಾರ ಐಟಿಡಿಸಿಗೆ 50 ವರ್ಷಗಳಿಗೆ ಗುತ್ತಿಗೆ ನೀಡಿದೆ. 1973ರಲ್ಲಿ ರಾಜ್ಯ ಸರ್ಕಾರ ಮತ್ತು ಐಟಿಡಿಸಿ ನಡುವೆ ಈ ಬಗ್ಗೆ ಒಡಂಬಡಿಕೆ ಆಗಿದೆ. 
2023ರವರೆಗೂ ಐಟಿಡಿಸಿ ಜತೆಗಿನ ಗುತ್ತಿಗೆ ಅವಧಿಯಿದ್ದು ಈ ನಡುವೆ ಕೇಂದ್ರ ಸರ್ಕಾರ ನಷ್ಟದ ನೆಪ ಹೇಳಿ ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿದೆ. 1,64,354 ಚದರ ಅಡಿ ವಿಸ್ತೀರ್ಣ ಹೊಂದಿರುವ ಲಲಿತ್ ಮಹಲ್ ನಲ್ಲಿ 32 ರೂಂಗಳಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.