ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಸಂಪುಟ ಗ್ರೀನ್ ಸಿಗ್ನಲ್
1960ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದಲ್ಲಿ ಕಂಬಳ ಮತ್ತು ಚಕ್ಕಡಿ ಓಟದ ಸ್ಪರ್ಧೆಗೆ ರಾಜ್ಯದಲ್ಲಿ ಅವಕಾಶ ಕಲ್ಪಿಸುವ ಮಸೂದೆ ...

ಬೆಂಗಳೂರು: 1960ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದಲ್ಲಿ ಕಂಬಳ ಮತ್ತು ಚಕ್ಕಡಿ ಓಟದ ಸ್ಪರ್ಧೆಗೆ ರಾಜ್ಯದಲ್ಲಿ ಅವಕಾಶ ಕಲ್ಪಿಸುವ ಮಸೂದೆ ಮಂಡಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಂಪುಟ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಾನೂನು ಸಚಿವ ಟಿ.ಬಿ. ಜಯಚಂದ್ರ, ತಿದ್ದುಪಡಿ ಮಸೂದೆಯನ್ನು ಫೆಬ್ರವರಿ 6ರಿಂದ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದರು. ಅಧಿವೇಶನದಲ್ಲಿ ಕಾಯಿಗೆ ಪಾಸು ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.
ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ – ಕರ್ನಾಟಕ ತಿದ್ದುಪಡಿ ಮಸೂದೆ 2017 ಮಂಡಿಸಲು ಸಾಧ್ಯವಾಗುವಂತೆ ಪಶು ಸಂಗೋಪನಾ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು ಎಂದೂ ಅವರು ವಿವರಿಸಿದರು. ಇದೊಂದು ಸಾಂಪ್ರಾದಾಯಿಕ ಕ್ರೀಡೆಯಾಗಿದ್ದು ಮಸೂದೆ ಪಾಸು ಮಾಡಲು ಎಲ್ಲರು ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


