ಮಾಯಕೊಂಡ ಶಾಸಕನಿಂದ ಐಎಎಸ್ ಅಧಿಕಾರಿಗೆ ನಿಂದನೆ, ಹಲ್ಲೆಗೆ ಯತ್ನ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಮಾಯಕೊಂಡ ಶಾಸಕ ನಿಂದಿಸಿ, ಹಲ್ಲೆ ಮಾಡಲು ಯತ್ನಿಸಿರುವ ಘಟನೆ ...

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಮಾಯಕೊಂಡ ಶಾಸಕ ನಿಂದಿಸಿ, ಹಲ್ಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಶಿವಮೂರ್ತಿ ನಾಯ್ಕ್ ಅವರು ಪ್ರಾಥಮಿಕ ಶಿಕ್ಷಣ ಇಲಾಖೆ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು, ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಚಿವ ತನ್ವೀರ್ ಸೇಠ್ ಹಾಗೂ ಐಎಎಸ್ ಅಧಿಕಾರಿಗಳ ಸಂಘ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿರುವ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅಜಯ್ ಸೇಥ್ ವಿಧಾನಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರೂ ಆಗಿರುವ ಕೆ. ಶಿವಮೂರ್ತಿ ನಾಯ್ಕ್ ಇದೇ 27ರಂದು ಬೆಳಿಗ್ಗೆ 11ಗಂಟೆಗೆ ನನ್ನ ಕಚೇರಿಗೆ ಬಂದಿದ್ದರು. ಅವರು ಅಧ್ಯಕ್ಷರಾಗಿರುವ ಚಿತ್ರದುರ್ಗ ಜಿಲ್ಲೆಯ ಬಂಜಾರ ಯುವಕ ಸಂಘದ 4 ಪ್ರೌಢಶಾಲೆ ಮತ್ತು 1 ಪದವಿಪೂರ್ವ ಕಾಲೇಜು ಅನ್ನು ವೇತನಾನುದಾನಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿದರು ಎಂದು ತಿಳಿಸಿದ್ದಾರೆ.
ಇಲಾಖೆಯಲ್ಲಿರುವ ದಾಖಲೆಗಳ ಪ್ರಕಾರ ಶಾಲೆಗಳು ನಡೆಯುತ್ತಿದ್ದಾಗಲೇ ಮಕ್ಕಳ ಹಾಜರಾತಿ ಇರಲಿಲ್ಲ. ಈ ಶಾಲೆಗಳು ಮುಚ್ಚಿ ಹೋಗಿ ಹಲವು ವರ್ಷಗಳೇ ಕಳೆದಿದೆ. ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಅವಕಾಶ ಇಲ್ಲ ಎಂದು ಅವರಿಗೆ ವಿವರಿಸಿದೆ. ಆದರೆ, ಅದನ್ನು ಕೇಳಿಸಿಕೊಳ್ಳಲು ತಯಾರಿಲ್ಲದ ನಾಯ್ಕ್ ಅನಗತ್ಯವಾಗಿ ರಾದ್ದಾಂತ ನಡೆಸಿದರು ಪತ್ರದಲ್ಲಿ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


