ಬಿಎಸ್ ವೈಗೆ ಮತ್ತೆ ಸಂಕಷ್ಟ: ಡಿನೋಟಿಫೈ ಪ್ರಕರಣದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣದ ತನಿಖೆಗೆ ತಡೆ ನೀಡಲು....

Published On :
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣದ ತನಿಖೆಗೆ ತಡೆ ನೀಡಲು ಹೈಕೋರ್ಟ್ ಸೋಮವಾರ ನಿರಾಕರಿಸಿದ್ದು, ಮಾಜಿ ಮುಖ್ಯಮಂತ್ರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
2010ರಲ್ಲಿ ಗಂಗೇನಹಳ್ಳಿಯಲ್ಲಿ 1ಎಕರೆ 11ಗುಂಟೆ ಜಮೀನನ್ನು ಡಿನೋಟಿಫೈ ಮಾಡಿರುವ ಪ್ರಕರಣದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಎಸ್ ವೈ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಏತನ್ಮಧ್ಯೆ ಪ್ರಕರಣದ ತನಿಖೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಡಿನೋಟಿಫಿಕೇಶನ್ ಪ್ರಕರಣದಲ್ಲಿ ಯಡಿಯೂರಪ್ಪ ಮತ್ತೆ ಸಂಕಷ್ಟಕ್ಕೆ ಸಿಲುಕಿಕೊಂಡತಾಗಿದೆ. ಹೈಕೋರ್ಟ್ ಪೀಠ ಜುಲೈ 7ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


