ಮೇಕೆದಾಟು ಡ್ಯಾಂ; ನ್ಯಾಯಾಧೀಕರಣದ ಆದೇಶ ಉಲ್ಲಂಘಿಸಿಲ್ಲ: ಸಿಎಂ
ಉದ್ದೇಶಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ತಪ್ಪು ವಿವರಣೆ ನೀಡಿದೆ....

Published On :
ಬೆಂಗಳೂರು: ಉದ್ದೇಶಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ತಪ್ಪು ವಿವರಣೆ ನೀಡಿದೆ ಎಂಬ ತಮಿಳುನಾಡು ರಾಜಕೀಯ ಪಕ್ಷಗಳ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಈ ಕುರಿತು ಇಂದು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ತಮಿಳುನಾಡು ಯಾವಾಗ ಸತ್ಯ ಒಪ್ಪಿಕೊಂಡಿದೆ? ಮೇಕೆದಾಟುವಿನಲ್ಲಿ ನಾವು ನಿರ್ಮಾಣ ಮಾಡುತ್ತಿರುವ ಸಮತೋಲನ ಜಲಾಶಯದಿಂದ ತಮಿಳುನಾಡಿಗೆ ಯಾವುದೇ ಪರಿಣಾಮ ಬೀರಲ್ಲ ಮತ್ತು ಕಾವೇರಿ ನ್ಯಾಯಾಧೀಕರಣದ ಆದೇಶವನ್ನು ಉಲ್ಲಂಘಿಸಿಲ್ಲ ಎಂದಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ನ್ಯಾಯಾಧೀಕರಣದ ಆದೇಶದಂತೆ ತಮಿಳುನಾಡಿಗೆ ನೀರು ಬಿಡುವ ಉದ್ದೇಶದಿಂದಲೇ ಈ ಸಮತೋಲನ ಜಲಾಶಯ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
ಇದೇ ವೇಳೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ತಪ್ಪು ಮಾಹಿತಿ ನೀಡಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ಪಡೆದಿದೆ ಎಂಬ ತಮಿಳುನಾಡು ರಾಜಕೀಯ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ತಮಿಳುನಾಡು ಯಾವತ್ತೂ ಸತ್ಯವನ್ನು ಒಪ್ಪಿಕೊಳ್ಳುವುದಿಲ್ಲ ಎಂದರು.
ನಿನ್ನೆಯಷ್ಟೆ ಪಿಎಂಕೆ ಮತ್ತು ಎಂಡಿಎಂಕೆ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಒಪ್ಪಿಗೆ ನೀಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಮೇಕೆದಾಟುMekedatu damno violation of tribunal orderನ್ಯಾಯಾಧೀಕರಣದ ಆದೇಶ ಉಲ್ಲಂಘಿಸಿಲ್ಲ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


