ಶ್ರೀಗಳ ವಿರುದ್ಧ ಅವಹೇಳನಕಾರಿ ಭಾಷಣ: ಪ್ರಮೋದ್ ಮುತಾಲಿಕ್ ವಿರುದ್ಧ ಕೇಸ್ ದಾಖಲು
ಉಡುಪಿ ಶ್ರೀ ಕೃಷ್ಣಮಠದ ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...

Published On :
ಬೆಂಗಳೂರು: ಉಡುಪಿ ಶ್ರೀ ಕೃಷ್ಣಮಠದ ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಕೃಷ್ಣಮಠದಲ್ಲಿ ಪೇಜಾವರ ಶ್ರೀಗಳು ಮುಸ್ಲಿಂರಿಗಾಗಿ ಇಫ್ತಾರ್ ಕೂಟ ಆಯೋಜಿಸಿದ್ದಕ್ಕೆ ಶ್ರೀರಾಮಸೇನೆ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ಈ ಸಂಬಂಧ ಜುಲೈ 2ರಂದು ಮೌರ್ಯ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಯಾವುದೇ ದೇವಸ್ಥಾನದಲ್ಲಿ ಇನ್ನುಂದೆ ಇಫ್ತಾರ್ ಮತ್ತು ನವಾಜ್ ಗೆ ಅವಕಾಶ ಮಾಡಿಕೊಟ್ಟರೆ ನಾನು ಹಾಗೂ ನನ್ನು ಬೆಂಬಲಿಗರು ರಕ್ತ ಹರಿಸುತ್ತೇವೆ ಎಂದು ಹೇಳಿದ್ದರು.
ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್ 153(ಎ), 295(ಎ) ಮತ್ತು 506 ಅಡಿಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
pramod muthalikಪ್ರಮೋದ್ ಮುತಾಲಿಕ್ಶ್ರೀರಾಮಸೇನೆಉಡುಪಿudupiSri rama seneSri Krishna MuttPejawar seerಪೇಜಾವರ್ ಶ್ರೀಶ್ರೀಕೃಷ್ಣ ಮಠ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


