ತಮಿಳುನಾಡಿಗೆ ನೀರು ಬಿಡದಂತೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ
ಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ತಕ್ಷಣವೇ ನಿಲ್ಲಿಸದಿದ್ದರೆ ಹೋರಾಟ ನಡೆಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ...

Published On :
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ತಕ್ಷಣವೇ ನಿಲ್ಲಿಸದಿದ್ದರೆ ಹೋರಾಟ ನಡೆಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಜಲಾಶಯಗಳಲ್ಲಿ ಸಂಗ್ರಹವಾಗುತ್ತಿರುವ ಅಲ್ಪಸ್ವಲ್ಪ ನೀರನ್ನು ಕೆರೆಗಳನ್ನು ತುಂಬಿಸುವುದಕ್ಕೆ ಬಳಕೆ ಮಾಡಬೇಕು ಎಂದು ಒತ್ತಾಯಿಸಿದರು.
ಕೆಆರ್‍ಎಸ್, ಹಾರಂಗಿ, ಕಬಿನಿ, ಹೇಮಾವತಿ ಜಲಾಶಯಗಳಿಗೆ ಅಲ್ಪಸ್ವಲ್ಪ ನೀರು ಹರಿದು ಬರುತ್ತಿದ್ದು, ಈ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಈ ಸಲವೂ ಮುಂಗಾರು ವಿಫಲ ಆಗುವ ಸೂಚನೆಗಳಿದ್ದು ಇರುವ ನೀರನ್ನು ಸಂಗ್ರಹಿಸಿಟ್ಟುಕೊಳ್ಳದೆ ತಮಿಳುನಾಡಿಗೆ ಬಿಡುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.
ಮಂಡ್ಯ ಭಾಗದ ರೈತರು ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ, ಸರ್ಕಾರ ಎಚ್ಚೆತ್ತುಕೊಂಡ ನೀರು ಹರಿಸುವುದನ್ನು ನಿಲ್ಲಿಸಬೇಕು ಇಲ್ಲದಿದ್ದರೇ ಪ್ರತಿಭಟನೆ ನಡೆಸುವುದಾಗಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಈ ವರ್ಷವೂ ಮುಂಗಾರು ಕೊರತೆಯಾಗುತ್ತಿದೆ. ಜೂನ್ ನಲ್ಲಿ ಸುರಿದ ಮಳೆಯಿಂದ ಯಾವುದೇ ಕೆರೆ ಕಟ್ಟೆಗಳು ಭರ್ತಿಯಾಗಿಲ್ಲ, ಅಂತರ್ಜಲದ ಮಟ್ಟ ಹೆಚ್ಚಾಗಿಲ್ಲ, ಮಳೆ ಹೆಚ್ಚಾಗಿ ಜಲಾಶಯ ತುಂಬಿದರೇ ತಮಿಳುನಾಡಿಗೆ ನೀರು ಬಿಡಲಿ, ಅಲ್ಲಿಯವರೆಗೂ ನೀರು ಹರಿಸುವುದು ಬೇಡ ಎಂದು ಅವರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Tamil NaduState Governmentರಾಜ್ಯ ಸರ್ಕಾರH D Kumaraswamyತಮಿಳು ನಾಡುCauvery waterಕಾವೇರಿ ನೀರುಎಚ್ .ಡಿ ಕುಮಾರಸ್ವಾಮಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


