ರಾಜ್ಯ

ವಿಜಯಪುರದಲ್ಲಿ ಅಮಾನವೀಯ ಘಟನೆ: ಮಹಿಳೆ, ಪುರುಷನನ್ನು ಬೆತ್ತಲುಗೊಳಿಸಿ ಥಳಿತ

ಅನೈತಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಪತಿಯನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ....

ವಿಜಯಪುರದಲ್ಲಿ ಅಮಾನವೀಯ ಘಟನೆ: ಮಹಿಳೆ, ಪುರುಷನನ್ನು ಬೆತ್ತಲುಗೊಳಿಸಿ ಥಳಿತ
ಸಾಂದರ್ಭಿಕ ಚಿತ್ರ
Published On :
ವಿಜಯಪುರ: ಅನೈತಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಪತಿಯನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿಯಲ್ಲಿ ಮಂಗಳವಾರ ನಡೆದಿದೆ.
ಮಹಿಳೆಯೊಬ್ಬರು ಮೌಲಾಲಿ ಎಂಬ ವ್ಯಕ್ತಿಯ ಜೊತೆ ನಿಂತಿದ್ದಾಗ ಅದನ್ನು ನೋಡಿದ ಮೌಲಾಲಿ ಪತ್ನಿ ಮತ್ತು ಆಕೆಯ ಸಹೋದರ ಸಿಕಂದರ್ ಬೆಂಬಲಿಗರೊಂದಿಗೆ ಬಂದು ಮಹಿಳೆ ಮತ್ತು ಆಕೆಯ ಪತಿಯನ್ನು ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆಯ ದೃಶ್ಯಾವಳಿಗಳನ್ನೂ ಚಿತ್ರೀಕರಿಸಿದ್ದಾರೆ. ವಿಡಿಯೋ ದೃಶ್ಯಾವಳಿಗಳು ಬಹಿರಂಗವಾಗುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 
ಥಳಿತಕ್ಕೊಳಗಾದ ಮಹಿಳೆ ಥಳಿಸಿದ ಮಹಿಳೆಯ ಪತಿ ಮೌಲಾಲಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಹಣಕಾಸು ವ್ಯವಹಾರ ಹೊಂದಿದ್ದು ಇದೇ ಕಾರಣಕ್ಕೆ ಹಲ್ಲೆ ನಡೆಸಿರುವುದಾಗಿ ಹೇಳಲಾಗಿದೆ. 
ಹಲ್ಲೆಗೊಳಗಾದ ಮಹಿಳೆ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಹಿಳೆ ಮರ್ಯಾದೆಗೆ ಅಂಜಿ ದೂರು ನೀಡಿರಲಿಲ್ಲ. ಆದರೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಪೊಲೀಸರು 9 ಮಂದಿಯ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.