ಕೂಡಲೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ: ಸುಪ್ರೀಂಗೆ ತಮಿಳುನಾಡು ಅರ್ಜಿ
ಕೂಡಲೇ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಎಂದು ಸುಪ್ರೀಂಕೋರ್ಟ್'ಗೆ ತಮಿಳುನಾಡು ಸರ್ಕಾರ ಬುಧವಾರ ಅರ್ಜಿ ಸಲ್ಲಿಸಿದೆ...

Published On :
ನವದೆಹಲಿ: ಕೂಡಲೇ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಎಂದು ಸುಪ್ರೀಂಕೋರ್ಟ್'ಗೆ ತಮಿಳುನಾಡು ಸರ್ಕಾರ ಬುಧವಾರ ಅರ್ಜಿ ಸಲ್ಲಿಸಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಕರ್ನಾಟಕ ಸರ್ಕಾರ ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಈಗಲೂ ತಮಿಳುನಾಡು ರಾಜ್ಯಕ್ಕೆ 5.966 ಟಿಎಂಸಿ ನೀರು ಹರಿಸುವುದು ಬಾಕಿಯಿದ್ದು, ಕೂಡಲೇ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಎಂದು ತಮಿಳುನಾಡು ಸುಪ್ರೀಂಕೋರ್ಟ್'ಗೆ ತಿಳಿಸಿದೆ.
ಕಳೆದ ಮಾರ್ಚ್ ತಿಂಗಳಿನಲ್ಲಿ ಆದೇಶ ಹೊರಡಿಸಿದ್ದ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೂ ತಮಿಳುನಾಡು ರಾಜ್ಯಕ್ಕೆ ಪ್ರತಿ ನಿತ್ಯ 2000 ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಸೂಚನೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtತಮಿಳುನಾಡುಸುಪ್ರೀಂಕೋರ್ಟ್Tamil NaduKarnatakaಕರ್ನಾಟಕCauvery water Disputeಕಾವೇರಿ ನದಿ ನೀರು ವಿವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


