ಬಂಟ್ವಾಳ: ಆರ್ ಎಸ್ ಎಸ್ ಕಾರ್ಯಕರ್ತನಿಗೆ ಅಪರಿಚಿತರಿಂದ ಚೂರಿ ಇರಿತ
ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಚೂರಿಯಿಂದ ಇರಿದು ...

Published On :
ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.
ಬಂಟ್ವಾಳದ ಸಮೀಪ ಕಂದೂರು ನಿವಾಸಿ ಶರತ್ (28) ಗೆ ಚೂರಿಯಿಂದ ಇರಿಯಲಾಗಿದೆ. ಶರತ್ ಬಿ.ಸಿ.ರೋಡ್ ನಲ್ಲಿರುವ ಲಾಂಡ್ರಿಯೊಂದರ ಮಾಲಿಕರಾಗಿದ್ದಾರೆ. ಅಂಗಡಿ ಮುಚ್ಚಿ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ.
ಘಟನೆಯಿಂದ ಶರತ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕಾಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಸೂಪರಿಂಡೆಂಟ್ ಸುಧೀರ್ ಕುಮಾರ್ ರೆಡ್ಡಿ ಪರಿಶೀಲನೆ ನಡೆಸಿ ಬಿ.ಸಿ.ರೋಡ್‌ನಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಕೋಮು ಗಲಭೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಜುಲೈ 11ರ ವರೆಗೂ ಮುಂದುವರಿಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
stabಚೂರಿ ಇರಿತBantwalಬಂಟ್ವಾಳRSS activistಆರ್ ಎಸ್ ಎಸ್ ಕಾರ್ಯಕರ್ತunidentified assailantsಅಪರಿಚಿತ ದುಷ್ಕರ್ಮಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


