ಕನ್ನಡ ಮಾಧ್ಯಮದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲು: ರಾಜ್ಯ ಸರ್ಕಾರದಿಂದ ಪರಿಷ್ಕೃತ ಸುತ್ತೋಲೆ
ಒಂದರಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ನೇರ ನೇಮಕಾತಿಯಲ್ಲಿ ಶೇ 5ರಷ್ಟು ಹುದ್ದೆಗಳನ್ನು ಮೀಸಲಿಡುವ ...

Published On :
ಬೆಂಗಳೂರು: ಒಂದರಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ನೇರ ನೇಮಕಾತಿಯಲ್ಲಿ ಶೇ 5ರಷ್ಟು ಹುದ್ದೆಗಳನ್ನು ಮೀಸಲಿಡುವ ನಿಯಮಗಳಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕನ್ನಡ ಮಾಧ್ಯಮ ಮೀಸಲಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೇ 10ನೇ ತರಗತಿಯವರೆಗೂ ಕನ್ನಡ ಮಾಧ್ಯಮದಲ್ಲಿ ಓದಿರಬೇಕಿತ್ತು. ಕನಿಷ್ಠ ವಿದ್ಯಾರ್ಹತೆ ಏಳನೇ ತರಗತಿ ಎಂದು ನಿಗದಿಪಡಿಸಿದ್ದ ಹುದ್ದೆಗಳಿಗೆ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿಲ್ಲ ಎಂಬ ಕಾರಣಕ್ಕೆ ಅವಕಾಶ ನಿರಾಕರಿಸಲಾಗುತ್ತಿತ್ತು. ಈ ನಿಯಮವನ್ನು ಬದಲಾವಣೆ ಮಾಡಿರುವ ಸರ್ಕಾರ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.
ಯಾವುದಾದರೂ ಹುದ್ದೆಗೆ ಏಳನೇ ತರಗತಿ ವಿದ್ಯಾರ್ಹತೆಯಾಗಿದ್ದು, ಅರ್ಜಿ ಹಾಕುವ ಅಭ್ಯರ್ಥಿ ಅಲ್ಲಿಯವರೆಗೂ ಕನ್ನಡ ಮಾಧ್ಯಮದಲ್ಲಿ ಓದಿದ್ದರೆ ಅಂತಹವರಿಗೂ ಮೀಸಲು ಸೌಲಭ್ಯ ಸಿಗಲಿದೆ.
ಹೊಸ ಸುತ್ತೋಲೆ ಅನ್ವಯ, ದೇಶದ ಯಾವುದೇ ಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ 1ರಿಂದ 10 ನೇ ತರಗತಿವರೆಗೆ ಓದಿದವರು ಇನ್ನು ಮುಂದೆ ಅರ್ಜಿ ಸಲ್ಲಿಸಬಹುದು.
ಇದರಿಂದಾಗಿ ಕರ್ನಾಟಕದ ಗಡಿಯಲ್ಲಿರುವ ಕನ್ನಡ ಶಾಲೆಗಳಲ್ಲಿ ಓದಿದ ಹೊರರಾಜ್ಯಗಳ ಕನ್ನಡಿಗರಿಗೂ ಉದ್ಯೋಗಾವಕಾಶ ಸಿಗಲಿದೆ. ಈ ಹಿಂದೆ ಕರ್ನಾಟಕದ ಶಾಲೆಗಳಲ್ಲಿ ಓದಿದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಈ ಹಿಂದೆ ಅವಕಾಶ ಇತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
State Governmentರಾಜ್ಯ ಸರ್ಕಾರKannada Mediumಕನ್ನಡ ಮಾಧ್ಯಮಸರ್ಕಾರಿ ಉದ್ಯೋಗgovernment job5 per cent Reservationಶೇ.5 ಮೀಸಲಾತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


