ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ: ನಮ್ಮ ಮೆಟ್ರೋ ಸಂಪೂರ್ಣ ಸ್ಥಗಿತ, ಪ್ರಯಾಣಿಕರ ಪರದಾಟ
ಮೆಟ್ರೋ ಸಿಬ್ಬಂದಿಯ ಮೇಲೆ ಭದ್ರತಾ ಪಡೆ ಸಿಬಂದಿ ಹಲ್ಲೆ ನಡೆಸಿದ್ದನ್ನು ಖಂಡಿಸಿ ಮೆಟ್ರೋ ಸಿಬಂದಿಗಳು ಪ್ರತಿಭಟನೆಗಿಗಳಿದಿದ್ದು, ಶುಕ್ರವಾರ ನರರದಲ್ಲಿ ಮೆಟ್ರೋ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮೆಟ್ರೋ ಸಿಬ್ಬಂದಿಯ ಮೇಲೆ ಭದ್ರತಾ ಪಡೆ ಸಿಬಂದಿ ಹಲ್ಲೆ ನಡೆಸಿದ್ದನ್ನು ಖಂಡಿಸಿ ಮೆಟ್ರೋ ಸಿಬಂದಿಗಳು ಪ್ರತಿಭಟನೆಗಿಗಳಿದಿದ್ದು, ಶುಕ್ರವಾರ ನರರದಲ್ಲಿ ಮೆಟ್ರೋ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.
ನಿನ್ನೆ ಸರ್ ಎಂ.ವಿಶ್ವೇಶ್ವರಯ್ಯ ಸೆಂಟ್ರಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಕ್ಷುಲಕ್ಕ ವಿಚಾರಕ್ಕೆ ಗುರುವಾರ ಮೆಟ್ರೋ ಸಿಬ್ಬಂದಿ ಹಾಗೂ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿತ್ತು. ಘಟನೆಯನ್ನು ಖಂಡಿಸಿ ಮೆಟ್ರೋ ಸಿಬ್ಬಂದಿ ಭದ್ರತಾ ಪಡೆಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ರಾಕೇಶ್ ಮತ್ತು ಹರೀಶ್ ಎಂಬ ಇಬ್ಬರು ಮೆಟ್ರೋ ಸಿಬ್ಬಂದಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿ ಆನಂದ್ ಗುಡ್ಡದ್ ಅವರನ್ನು ಕೂಡ ವಿಚಾರಣೆಗೊಳಪಡಿಸಿದ್ದಾರೆ.
ಇದೀಗ ಮೆಟ್ರೋ ಸಿಬ್ಬಂದಿ ಮೇಲಿನ ಹಲ್ಲೆ ಮತ್ತು ಬಂಧನವನ್ನು ಖಂಡಿಸಿ ಮೆಟ್ರೋ ಸಿಬ್ಬಂದಿ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಸಂಪೂರ್ಣ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ನಿತ್ಯ ಮೆಟ್ರೋ ಅವಲಂಬಿಸುತ್ತಿದ್ದ ಲಕ್ಷಾಂತರ ಪ್ರಯಾಣಿಕರು ಪರದಾಡುವಂತಾಗಿದೆ. ಮೆಟ್ರೋ ಇಲ್ಲದ ಕಾರಣ ಹೆಚ್ಚಿನ ಪ್ರಾಯಾಣಿಕರು ರಸ್ತೆಗಳಿಗೆ ವಾಹನಗಳನ್ನು ಇಳಿಸಿರುವ ಕಾರಣ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


