ರಾಜ್ಯ

ಆರ್ ಎಸ್ಎಸ್ ಕಾರ್ಯಕರ್ತ ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ, ಇಬ್ಬರ ಬಂಧನ

ಶನಿವಾರ ಮೃತರಾದ ಅರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಶವಯಾತ್ರೆ ವೇಳೆ ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ಕಲ್ಲುತೂರಾಟ ಘಟನೆ ಸಂಭವಿಸಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಆರ್ ಎಸ್ಎಸ್ ಕಾರ್ಯಕರ್ತ ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ, ಇಬ್ಬರ ಬಂಧನ
ಕೆಎಸ್ ಆರ್ ಪಿ ತುಕಡಿ
Published On :

ಬಂಟ್ವಾಳ: ಶನಿವಾರ ಮೃತರಾದ ಅರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಶವಯಾತ್ರೆ ವೇಳೆ ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ಕಲ್ಲುತೂರಾಟ ಘಟನೆ ಸಂಭವಿಸಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಶರತ್ ಶವಯಾತ್ರೆ ಬಿಸಿ ರೋಡ್ ಸಮೀಪಿಸುತ್ತಿದ್ದಂತೆಯೇ ದುಷ್ಕರ್ಮಿಗಳು ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅಂತೆಯೇ ಘಟನೆಯಲ್ಲಿ ಹಲವು ವಾಹನಗಳು  ಜಖಂಗೊಂಡಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಮತ್ತು ಅಲ್ಲಿ ನಿಯೋಜನೆಗೊಂಡಿದ್ದ ಕೆಎಸ್ ಆರ್ ಪಿ ಮತ್ತು ತುರ್ತ ಪ್ರಹಾರ ದಳಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಲ್ಲು ತೂರಾಟದಲ್ಲಿ ತೊಡಗಿದ್ದ  ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಕರ್ತರು, ಪೊಲೀಸರ ನಡುವೆ ಮಾತಿನ ಚಕಮಕಿ
ಬಿ.ಸಿ. ರೋಡ್ ನಲ್ಲಿ ಶರತ್ ರ ಮೃತದೇಹವನ್ನು ಇಳಿಸಲು ಸಂಘಪರಿವಾರದ ಕಾರ್ಯಕರ್ತರು ಮುಂದಾದಾಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು  ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಈ ಸಂದರ್ಭ ಕಲ್ಲುತೂರಾಟ ನಡೆದಿದೆ ಎನ್ನಲಾಗಿದೆ. ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಬಿ.ಸಿ.ರೋಡ್ ನಲ್ಲಿ ಬಸ್ ಗಳು, ವಾಹನಗಳು, ಅಂಗಡಿಗಳ ಮೇಲೆ ಕಲ್ಲುತೂರಾಟ  ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಸಿ ರೋಡ್ ನಲ್ಲಿ ವಾಣಿಜ್ಯ ಕಟ್ಟಡಗಳು, ಶಾಪಿಂಗ್ ಮಾಲ್ ಗಳು ಇತರೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದ್ದು, ಪ್ರತೀ ಶಾಪಿಂಗ್ ಮಾಲ್ ಗೆ ತೆರಳಿ ಖುದ್ಧ ಪೊಲೀಸರು  ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.