ಜನತಾ ದರ್ಶನದಲ್ಲಿ ಕಾಯಿಲೆಯಿಂದ ಬಳಲುತ್ತದ್ದ ವೃದ್ಧನಿಗೆ ಸಿಎಂ ಸಿದ್ದರಾಮಯ್ಯ ಧನಸಹಾಯ
ಕಾಲು ನೋವಿನಿಂದ ಬಳಲುತ್ತಿದ್ದ ವೃದ್ಧನೋರ್ವನಿಗೆ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪಾಕೆಟ್ ನಲ್ಲಿದ್ದ ಹಣ ನೀಡಿ ಸಹಾಯ ಮಾಡಿದ್ದಾರೆ..

Published On :
ಬೆಂಗಳೂರು: ಕಾಲು ನೋವಿನಿಂದ ಬಳಲುತ್ತಿದ್ದ ವೃದ್ಧನೋರ್ವನಿಗೆ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪಾಕೆಟ್ ನಲ್ಲಿದ್ದ ಹಣ ನೀಡಿ ಸಹಾಯ ಮಾಡಿದ್ದಾರೆ.
ಬುಧವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಸುಮಾರು 100 ಮಂದಿಯನ್ನು ಸಿಎಂ ಜನತಾ ದರ್ಶನದಲ್ಲಿ ಭೇಟಿ ಮಾಡಿದರು. ಈ ವೇಳೆ 70 ವರ್ಷದ ವೃದ್ಧನೋರ್ವ ನೋವಿನಿಂದ ಬಳಲುತ್ತಿದ್ದದ್ದನ್ನು ಗಮನಿಸಿದ ಸಿಎಂ ಆತನಿಗೆ ಸಹಾಯ ಮಾಡಿದ್ದಾರೆ.
ಕಾಲಿನ ಅಲರ್ಜಿಯಿಂದ ಬಳಲುತ್ತಿದ್ದ ವ್ಯಕ್ತಿಗೆ ಆಯುರ್ವೇದ ಚಿಕಿತ್ಸೆಯ ಅವಶ್ಯಕತೆಯಿದ್ದು, ಕಳೆದ ಶನಿವಾರವೂ ಸಿಎಂ ನೋಡಲು ಬಂದಿದ್ದರು. ಆದರೆ ಸಾಧ್ಯವಾಗಿರಲಿಲ್ಲ, ಈ ವೇಳೆ ತಮ್ಮ ಪರ್ಸ್ ನಲ್ಲಿದ್ದ 7.500 ರು ಹಣವನ್ನು ಆತನಿಗೆ ನೀಡಿ, ಆರೋಗ್ಯವೇ ಬಹಳ ಮುಖ್ಯವಾದದ್ದು, ಯಾವತ್ತೂ ಅದನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


