ಉಡುಪಿ: ಸೈನೈಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಬೆಳ್ಳೆಯಲ್ಲಿ...

Published On :
ಉಡುಪಿ : ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಬೆಳ್ಳೆಯಲ್ಲಿ ನಡೆದಿದೆ.
ಶಂಕರ ಆಚಾರ್ಯ(51) ಪತ್ನಿ ನಿರ್ಮಲ ಆಚಾರ್ಯ( 45) ಮಕ್ಕಳಾದ ಶ್ರುತಿ(25) ಮತ್ತು ಶ್ರೇಯ( 22) ಆತ್ಮಹತ್ಯೆಗೆ ಶರಣಾದವರು.
ಶಂಕರ್ ಆಚಾರ್ಯ ಅವರು ಪಡುಬೆಳ್ಳೆಯಲ್ಲಿ ಚಿನ್ನದ ಅಂಗಡಿ ನಡೆಸುತ್ತಿದ್ದರು. ಶೃತಿ ಎಂಬಿಎ ಪಧವೀಧರೆಯಾಗಿದ್ದು, ಶ್ರೇಯಾ ಎಂಸಿಎ ಓದುತ್ತಿದ್ದಳು.
ಪಕ್ಕದ ಮನೆಯಲ್ಲಿ ವಾಸವಿದ್ದ ಸಂಬಂದಿಗಳಿಂದ ಪ್ರಕರಣ ಬಯಲಾಗಿದ್ದು, ಕಸ್ತೂರ ಬಾ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ.
ಶೃತಿಗೆ ವಿವಾಹ ನಿಶ್ಚಯವಾಗಿದ್ದು, ಸೆಪ್ಟಂಬರ್ 5 ರಂದು ದಿನಾಂಕ ನಿಗದಿಯಾಗಿತ್ತು. ಗುರುವಾರ ಅವರು ಮದುವೆಗಾಗಿ ಛತ್ರ ಬುಕ್ ಮಾಡಿಸಲು ಯೋಜಿಸಿದ್ದರು. ವಿಷವನ್ನು ಆಹಾರದಲ್ಲಿ ಬೆರೆಸಿ ತಿಂದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತರ ಮನೆಯಲ್ಲಿ ಅನ್ನ ಸಾರು ಇದ್ದ ತಟ್ಟೆ ಪತ್ತೆಯಾಗಿದೆ. ಬೆಳಗ್ಗೆ 6 ರಿಂದ 8 ಗಂಟೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ, ಯಾವುದೇ ಡೆತ್ ನೋಟ್ ಕೂಡ ಪತ್ತೆಯಾಗಿಲ್ಲ, ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


