ಹೈ-ಕ ಭಾಗಕ್ಕೆ ಸರ್ಕಾರಿ ಶಿಕ್ಷಕರನ್ನು ಸೆಳೆಯಲು ರಾಜ್ಯದಿಂದ ಭತ್ಯೆ ಹೆಚ್ಚಳ!
ಹೈದ್ರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳಿಗೆ ಶಿಕ್ಷಕರನ್ನು ಸೆಳೆಯಲು, ರಾಜ್ಯದ ಶಿಕ್ಷಣ ಇಲಾಖೆ ಆ ಭಾಗದಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಭತ್ಯೆ ಹೆಚ್ಚಳ ಮಾಡುವ ಪ್ರಸ್ತಾವನೆ ಮುಂದಿಟ್ಟಿದೆ.

Published On :
ಬೆಂಗಳೂರು: ಹೈದ್ರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳಿಗೆ ಶಿಕ್ಷಕರನ್ನು ಸೆಳೆಯಲು, ರಾಜ್ಯದ ಶಿಕ್ಷಣ ಇಲಾಖೆ ಆ ಭಾಗದಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಭತ್ಯೆ ಹೆಚ್ಚಳ ಮಾಡುವ ಪ್ರಸ್ತಾವನೆ ಮುಂದಿಟ್ಟಿದೆ.
ಹೈ-ಕಾ ಭಾಗದಲ್ಲಿ ಎದುರಾಗಿರುವ ಶಿಕ್ಷಕರ ಕೊರತೆಯನ್ನು ಸರಿದೂಗಿಸಲು ಭತ್ಯೆ ಹೆಚ್ಚಳ ಮಾಡುವ ಪ್ರಸ್ತಾವನೆ ಹೊಂದಿದೆ, ಅಷ್ಟೇ ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಮುಂದಾಗುವ ಶಿಕ್ಷಕರಿಗೆ ವಿಶೇಷವಾದ ಯೋಜನೆಗಳನ್ನು ಘೋಷಿಸುವ ಪ್ರಸ್ತಾವನೆ ಇದೆ ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಶಿಕ್ಷಣ ಇಲಾಖೆ ಇಂಥಹದ್ದೊಂದು ಪ್ರಸ್ತಾವನೆ ಮುಂದಿಟ್ಟಿದ್ದು, 7 ನೇ ವೇತನ ಆಯೋಗದ ಶಿಫಾರಸ್ಸುಗಳು ಜಾರಿಗೆ ಬರುವುದನ್ನು ಕಾಯುತಿದ್ದೇವೆ ಎಂದು ತನ್ವೀರ್ ಸೇಠ್ ಮಾಹಿತಿ ನೀಡಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ ಹೈ-ಕಾ ಭಾಗದಲ್ಲಿ 6,826 ಶಿಕ್ಷಕರ ಹುದ್ದೆಗಳಿದ್ದು, 5,400 ಹುದ್ದೆಗಳು ಖಾಲಿ ಇದ್ದು ಅತಿಥಿ ಶಿಕ್ಷಕರು ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ರಾಜ್ಯದ ಹಣಕಾಸು ಇಲಾಖೆ ಅನುಮತಿ ನೀಡಿದ್ದು, ಹೈದರಾಬಾದ್ ಕರ್ನಾಟಕ ಪ್ರದೇಶದ ಶಿಕ್ಷಕರಿಗೆ ಶೇ.50 ರಷ್ಟು ಭತ್ಯೆ ಹೆಚ್ಚಳ ಮಾಡುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


