ರಾಜ್ಯ

ಬಿಎಸ್ ವೈ, ಡಿಕೆಶಿಗೆ ಬಿಗ್ ರಿಲೀಫ್: ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ ರದ್ದು

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ....

ಬಿಎಸ್ ವೈ, ಡಿಕೆಶಿಗೆ ಬಿಗ್ ರಿಲೀಫ್: ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ ರದ್ದು
ಸುಪ್ರೀಂ ಕೋರ್ಟ್
Published On :
ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಇಂಧನ ಸಚಿವ  ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣವನ್ನು ಸುಪ್ರೀಂಕೋರ್ಟ್‌ ಶುಕ್ರವಾರ ರದ್ದುಗೊಳಿಸಿದೆ. 
ಬಿಎಸ್ ಯಡಿಯೂರಪ್ಪ ಹಾಗೂ ಡಿಕೆ ಶಿವಕುಮಾರ್ ಅವರ ವಿರುದ್ಧದ ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ಇಂದು ಎತ್ತಿ ಹಿಡಿದಿದೆ. 
ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಾಸಕರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಇಂದಿರಾನಗರ ಸಮೀಪದ ಬೆನ್ನಿಗಾನಹಳ್ಳಿಯ ನಾಲ್ಕೂವರೆ ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡು, ಬೇರೆಯವರಿಗೆ ಮಾರಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಾಂ ಮತ್ತು ಕಬ್ಬಾಳೆಗೌಡ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ ಇದನ್ನು ಪ್ರಶ್ನಿಸಿ ಅಬ್ರಹಾಂ ಮೇಲ್ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.