ರಾಜ್ಯ

'ನಾನು ಸಿದ್ದ'ರಾಮ', ನಾನೂ ಹಿಂದೂ, ಬಿಜೆಪಿಯವರಷ್ಟೇ ಹಿಂದೂಗಳಲ್ಲ'

ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ಮಾತ್ರವೇ ಹಿಂದೂಗಳಲ್ಲ, ನಾನೂ ಕೂಡ ಹಿಂದೂ ಎಂದು ಹೇಳಿದ್ದಾರೆ.

'ನಾನು ಸಿದ್ದ'ರಾಮ', ನಾನೂ ಹಿಂದೂ, ಬಿಜೆಪಿಯವರಷ್ಟೇ ಹಿಂದೂಗಳಲ್ಲ'
ಸಿಎಂ ಸಿದ್ದರಾಮಯ್ಯ
Published On :
ಮೈಸೂರು: ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ಮಾತ್ರವೇ ಹಿಂದೂಗಳಲ್ಲ, ನಾನೂ ಕೂಡ ಹಿಂದೂ ಎಂದು ಹೇಳಿದ್ದಾರೆ. 
ನನ್ನ ಹೆಸರು ಸಿದ್ದರಾಮಯ್ಯ, ನನ್ನ ಹೆಸರಿನಲ್ಲಿ ರಾಮನ ಹೆಸರಿದೆ, ಹೀಗಾಗಿ ನಾನು ಹಿಂದೂ, ಬಿಜೆಪಿಯವರಷ್ಟೇ ಹಿಂದೂಗಳಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಬೆಂಕಿ ಹಚ್ಚಲು ಹೊರಟಿದ್ದಾರೆ, ಇಂದಿಗೂ ಆ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. 
ಇದೇ ವೇಳೆ ಬಿಜೆಪಿ ಚುನಾವಣೆಗೆ ಸಿದ್ಧವಾಗಲು ವಿಸ್ತಾರಕ್ ಕಾರ್ಯತಂತ್ರ ರೂಪಿಸುತ್ತಿರುವುದರ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ವಿಸ್ತಾರಕ್ ಎಂದರೆ ಬಿಜೆಪಿಯ ಪ್ರಕಾರ ಹಿಂದುತ್ವವವನ್ನು ವಿಸ್ತರಿಸುವುದು ಎಂದರ್ಥ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.