ಡಿಐಜಿ ರೂಪಾ ಸೇರಿ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ!
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಾಹರಗಳ ಬಗ್ಗೆ ವರದಿ ಸಲ್ಲಿಸಿದ್ದ ಬಂಧಿಖಾನೆ ಡಿಐಜಿ...

Published On :
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಾಹರಗಳ ಬಗ್ಗೆ ವರದಿ ಸಲ್ಲಿಸಿದ್ದ ಬಂಧಿಖಾನೆ ಡಿಐಜಿ ಡಿ.ರೂಪಾ ಮತ್ತು ಡಿಜಿಪಿ ಸತ್ಯನಾರಾಯಣರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾರಿಗೆ ಸಂಚಾರ ಮತ್ತು ಸುರಕ್ಷತಾ ವಿಭಾಗದ ಐಜಿಪಿ ಆಗಿ ರೂಪಾ ಅವರನ್ನು ವರ್ಗಾವಣೆ ಮಾಡಲಾಗಿದೆ. ರೂಪಾ ಜೊತೆಗೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಡಿ.ರೂಪಾ, ಡಿಜಿಪಿ ಎಂ.ಎನ್.ರೆಡ್ಡಿ ಸೇರಿದಂತೆ ಒಟ್ಟು ಐದು ಐಪಿಎಸ್ ಅಧಿಕಾರಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಾರಾಗೃಹಗಳ ಇಲಾಖೆಯ ಡಿಜಿಪಿ ಎಚ್.ಎನ್. ಸತ್ಯನಾರಾಯಣರಾವ್ ಸ್ಥಾನಕ್ಕೆ ಎಸಿಬಿಯ ಎಡಿಜಿಪಿ ಆಗಿರುವ ಎನ್.ಎಸ್.ಮೇಘರಿಖ್ ಅವರನ್ನು ನೇಮಿಸಲಾಗಿದ್ದು, ಸತ್ಯನಾರಾಯಣ ಅವರನ್ನು ಯಾವ ಸ್ಥಾನಕ್ಕೆ ವರ್ಗಾಯಿಸಲಾಗಿದೆ ಎಂಬುದನ್ನು ಆದೇಶದಲ್ಲಿ ನಮೂದಿಸಿಲ್ಲ.
ಎಸಿಬಿ ಡಿಜಿಪಿಯಾಗಿ ಗುಪ್ತಚರ ಇಲಾಖೆ ಡಿಜಿಪಿ ಎಂ.ಎನ್.ರೆಡ್ಡಿ, ಸಂಚಾರ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾದ ಡಾ.ಎ.ಎಸ್.ಎನ್.ಮೂರ್ತಿ ಅವರನ್ನು ಅರಣ್ಯ ಘಟಕದ ಎಡಿಜಿಪಿ ಸ್ಥಾನಕ್ಕೆ ವರ್ಗಾಯಿಸಲಾಗಿದೆ.
ಎಂ.ಎನ್.ರೆಡ್ಡಿ ಅವರ ಸ್ಥಾನಕ್ಕೆ ಗುಪ್ತಚರ ಇಲಾಖೆ ಐಜಿಪಿ ಅಮ್ರಿತ್ ಪೌಲ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


