ಪರಪ್ಪನ ಜೈಲಿನಲ್ಲಿ ಶಶಿಕಲಾ ಸ್ವಚ್ಛಂದ ತಿರುಗಾಟ: ವಿಡಿಯೋ ಬಹಿರಂಗ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಶಿಕಲಾ ನಟರಾಜನ್ ಮತ್ತು ಇಳವರಸಿ ಜೈಲಿನ ಸಮವಸ್ತ್ರ ಧರಿಸದೆ ಸ್ವಚ್ಛಂದವಾಗಿ ಓಡಾಡುತ್ತಿರುವ ವಿಡಿಯೋ...

Published On :
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಶಿಕಲಾ ನಟರಾಜನ್ ಮತ್ತು ಇಳವರಸಿ ಜೈಲಿನ ಸಮವಸ್ತ್ರ ಧರಿಸದೆ ಸ್ವಚ್ಛಂದವಾಗಿ ಓಡಾಡುತ್ತಿರುವ ವಿಡಿಯೋ ಬಹಿರಂಗಗೊಂಡಿದೆ.
ಶಶಿಕಲಾ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಮತ್ತೊಂದು ವಿಡಿಯೋ ಸಾಕ್ಷಿಯಾದಂತಿದೆ. ಹಿರಿಯ ಪೊಲೀಸ್ ಅಧಿಕಾರಿ ಡಿ ರೂಪಾ ಅವರು ಮಾಡಿದ್ದ ಆರೋಪಕ್ಕೆ ಪೂರಕ ಎಂಬಂತೆ ಶಶಿಕಲಾಗೆ ನೀಡಲಾಗಿದ್ದ ಕೊಠಡಿ ಸೌಲಭ್ಯ ಕುರಿತಂತೆ ಮಾಧ್ಯಮಗಳಲ್ಲಿ ಬಯಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ವಿಡಿಯೋ ಬಹಿರಂಗಗೊಂಡಿದೆ.
ಈ ವಿಡಿಯೋದಲ್ಲಿ ಶಶಿಕಲಾ ರೇಷ್ಮೆ ಚೂಡಿದಾರ್ ಧರಿಸಿ ಫ್ಯಾನ್ಸಿ ಬ್ಯಾಗ್ ಹಿಡಿದು ಓಡಾಡುತ್ತಿದ್ದು ಅವರ ಹಿಂದೆಯೇ ಮತ್ತೊಬ್ಬ ಆರೋಪಿ ಇಳವರಸಿ ಜೈಲಿನ ಸಮವಸ್ತ್ರ ಧರಿಸದೆ ಓಡಾಡುತ್ತಿದ್ದಾರೆ.
ಶಶಿಕಲಾ ಅವರಿಗೆ 2 ಕೋಟಿ ಲಂಚ ಪಡೆದು ಅವರಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂದು ಕಾರಾಗೃಹ ಡಿಐಜಿಯಾಗಿದ್ದ ಡಿ.ರೂಪಾ ಅವರು ಆರೋಪ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಶಶಿಕಲಾSasikalaಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹD Roopaಡಿ ರೂಪಾParappana agrahara central prison
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


