ಭ್ರಷ್ಟಾಚಾರ ಆರೋಪ: ಬಿಇಓ ಗಳ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳ ಮೇಜರ್ ವರ್ಗಾವಣೆ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಶನಿವಾರವಷ್ಟೇ 251 ಬಿಇಓಗಳನ್ನು ...

Published On :
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳ ಮೇಜರ್ ವರ್ಗಾವಣೆ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಶನಿವಾರವಷ್ಟೇ 251 ಬಿಇಓಗಳನ್ನು ರಾಜ್ಯದ್ಯಾಂತ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.
ಆಯಕಟ್ಟಿನ ಸ್ಥಳಕ್ಕೆ ತಮಗೆ ಬೇಕಾದ ಅಧಿಕಾರಿಗಳನ್ನ ವರ್ಗಾವಣೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವರ್ಗಾವಣೆ ಪಟ್ಟಿ ತಡೆ ಹಿಡಿಯುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಮಂಗಳವಾರ ಪ್ರಾಥಮಿಕ ಶಿಕ್ಷಣ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚಿಸಿ, 251 ಬಿಇಓಗಳ ವರ್ಗಾವಣೆಗೆ ಅನುಮೋದನೆ ನೀಡಿದ್ದರು. ಶನಿವಾರ ತಡರಾತ್ರಿ ವರ್ಗಾವಣೆ ಪಟ್ಟಿ ರಿಲೀಸ್ ಮಾಡಲಾಗಿತ್ತು. ಬೆಂಗಳೂರಿನಲ್ಲಿರುವ 9 ಬಿಇಓಗಳ ಪೈಕಿ, ಆರು ಮಂದಿಯನ್ನು ವರ್ಗಾಯಿಸಲಾಗಿತ್ತು ಇಲಾಖಾ ಮೂಲಗಳು ತಿಳಿಸಿವೆ.
ಇಲಾಖೆಯ ವೆಬ್ ಸೈಟ್ ನಲ್ಲಿ ಪಟ್ಟಿ ಪ್ರಕಟಿಸಿದ ಮರುದಿನವೇ, ಬೆಂಗಳೂರಿನ ಹಲವು ಶಾಸಕರು ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು,. ಹೀಗಾಗಿ ಪಟ್ಟಿ ತಡೆ ಹಿಡಿಯುವಂತೆ ಸಿಎಂ ಆದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಹಲವು ಬಿಇಓಗಳ ವಿರುದ್ಧ ಭ್ರಷ್ಟಾಚಾರ ಆರೋಪವಿದೆ, ಆದರೆ ಸಿಎಂ ಇದರಲ್ಲಿ ಏಕೆ ಮಧ್ಯಪ್ರವೇಶಿಸಿದರೂ ಎಂಬುದು ನಮಗೆ ಅರ್ಥವಾಗುತ್ತಿಲ್ಲ, ಶಾಸಕರ ಮೂಲಕ ಕೆಲವರು ಸಿಎಂ ಮೇಲೆ ಒತ್ತಡ ತರಲು ಯತ್ನಿಸಿದ್ದಾರೆ, ಆದರೆ ಸಿಎಂ ಅದಕ್ಕೆ ಸೊಪ್ಪು ಹಾಕಬಾರದು ಎಂದು ಪ್ರಾಥಮಿಕ ಶಾಲೆ ಆಡಳಿತ ಮಂಡಳಿಗಳ ಸಂಘದ ಪ್ರತಿನಿಧಿ ಹೇಳಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಚಿವ ತನ್ವೀರ್ ಸೇಠ್ ಸಭೆ ನಡೆಸಿ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


