ರಾಜ್ಯ

ಬೆಂಗಳೂರು: ಐಎಎಸ್ ಅಧಿಕಾರಿ ಮನೆಯಿಂದ ನಗದು, ಚಿನ್ನ ದರೋಡೆ

ಹಿರಿಯ ಐಎಎಸ್ ಅಧಿಕಾರಿ ಸುಬೋಧ್ ಯಾದವ್ ಅವರ ಸಂಜಯ್ ನಗರ ನಿವಾಸದ ಬಾಗಿಲು....

ಬೆಂಗಳೂರು: ಐಎಎಸ್ ಅಧಿಕಾರಿ ಮನೆಯಿಂದ ನಗದು, ಚಿನ್ನ ದರೋಡೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಸುಬೋಧ್ ಯಾದವ್ ಅವರ ಸಂಜಯ್ ನಗರ ನಿವಾಸದ ಬಾಗಿಲು ಮುರಿದು ಒಳನುಗ್ಗಿದ ದರೋಡೆಕೋರರು ಅಪಾರ ಪ್ರಮಾಣದ ಚಿನ್ನ ಮತ್ತು ನಗದು ಕದ್ದು ಪರಾರಿಯಾದ ಘಟನೆ ಮೊನ್ನೆ ಭಾನುವಾರ ರಾತ್ರಿ ನಡೆದಿದೆ
ಅಧಿಕಾರಿಯ ಕಾರು ಚಾಲಕ ಮನೆಗೆ ಬಂದು ನೋಡಿದಾಗ ಮುಂಭಾಗಿಲು ಒಡೆದಿದ್ದು ಕಂಡುಬಂತು. ತಕ್ಷಣವೇ ಪೊಲೀಸರಿಗೆ ವಿಷಯ ತಿಳಿಸಿದರು.
ಕಳೆದ ಭಾನುವಾರ ಬೆಳಗ್ಗೆ ಯಾದವ್ ಮತ್ತು ಅವರ ಕುಟುಂಬ ಚೆನ್ನೈಗೆ ಹೋಗಿದ್ದರು. ಅದೇ ದಿನ ರಾತ್ರಿ ಈ ಘಟನೆ ನಡೆದಿದೆ. ದರೋಡೆಕೋರರು ಚಿನ್ನ ಮತ್ತು 12,000 ರೂ.ನಗದು ಕದ್ದು ಪರಾರಿಯಾಗಿದ್ದಾರೆ. 
ಕಳೆದ ನಾಲ್ಕು ವರ್ಷಗಳಿಂದ ಯಾದವ್ ಕುಟುಂಬ ಆ ಮನೆಯಲ್ಲಿ ವಾಸವಾಗಿತ್ತು. ನಗದು ಮತ್ತು ಚಿನ್ನಾಭರಣ ಕಳವಾಗಿದೆ ಎಂದು ಪೊಲೀಸರಿಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮನೆಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿಲ್ಲ. ಹಾಗಾಗಿ ದರೋಡೆಕೋರರನ್ನು ಹಿಡಿಯಲು ಸ್ವಲ್ಪ ಕಷ್ಟವಾಗುತ್ತಿದೆ. ಯಾದವ್ ಕುಟುಂಬದವರಿಗೆ ಪರಿಚಯವಿರುವವರೇ ಈ ದುಷ್ಕೃತ್ಯ ನಡೆಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.