ಹಿಂದಿ ಹೇರಿಕೆಗೆ ವಿರೋಧ: ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕಕ್ಕೆ ಕರವೇ ಮಸಿ!
ಹಿಂದಿ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ನಗರದ ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.

ಬೆಂಗಳೂರು: ಹಿಂದಿ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ನಗರದ ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.
ಕಳೆದ ರಾತ್ರಿ ಇಡೀ ಪ್ರತಿಭಟನೆ ನಡೆಸಿರುವ ಕರವೇ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಅಲ್ಲದೆ ರಾಜ್ಯಗಳ ಮೇಲೆ ಹಿಂದಿ ಹೇರಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು ರಾತ್ರಿ ಇಡೀ ನಗರದಾದ್ಯಂತ ಸಂಚರಿಸಿ ನಗರದ ಮೆಟ್ರೋ ನಿಲ್ದಾಣಗಳಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.
ನಗರದ ಯಶವಂತಪುರ, ರಾಜಾಜಿ ನಗರ, ಇಂದಿರಾನಗರ, ದೀಪಾಂಜಲಿ ನಗರ, ನ್ಯಾಷನಲ್ ಕಾಲೇಜು, ಮೈಸೂರು ರಸ್ತೆ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


